‘ದಿ ಇಂಡಿಯಾ ಹೌಸ್’ ಶೂಟಿಂಗ್‌ನಲ್ಲಿ ಹಲವರಿಗೆ ಗಾಯ

ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ ಶೂಟಿಂಗ್‌ನಲ್ಲಿ ನೀರಿನ ದೊಡ್ಡ ಟ್ಯಾಂಕರ್‌ ಒಡೆದು ಪ್ರವಾಹ ಸೃಷ್ಟಿಯಾದ ಪರಿಣಾಮ ಸಹಾಯಕ ಕ್ಯಾಮೆರಾಮೆನ್‌ ಮತ್ತು ಇನ್ನೂ ಕೆಲವು ಸಿಬ್ಬಂದಿ ಗಾಯಗೊಂಡಿದ್ದಾರೆ.

ಶಂಷಾಬಾದ್ ಬಳಿ ಸಿನಿಮಾ ಶೂಟಿಂಗ್‌ಗಾಗಿ ದೊಡ್ಡ ನೀರಿನ ಟ್ಯಾಂಕರ್‌ ನಿರ್ಮಾಣ ಮಾಡಲಾಗಿತ್ತು. ಭಾರೀ ಒತ್ತಡದಿಂದಾಗಿ ನೀರಿನ ಟ್ಯಾಂಕರ್‌ ಸ್ಫೋಟಗೊಂಡು ಪ್ರವಾಹ  ಸೃಷ್ಟಿಯಾದ ಪರಿಣಾಮ ನೀರಿನ ವೇಗಕ್ಕೆ ಸಿಕ್ಕಿ ಕ್ಯಾಮೆರಾಮೆನ್‌, ಇತರ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸಮಯದಲ್ಲಿ ರಾಮ್ ಚರಣ್   ಸೆಟ್‌ನಲ್ಲಿದ್ದರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ.  ಚಿತ್ರದ ಚಿತ್ರೀಕರಣವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.  ಈ ಕುರಿತ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

ಘಟನೆಯಿಂದ ಇಡೀ ಸೆಟಪ್ ನಾಶವಾಗಿದೆ ಎಂದು ಹೇಳಲಾಗುತ್ತಿದೆ. ಭಾರಿ ಆರ್ಥಿಕ ನಷ್ಟವೂ ಸಂಭವಿಸಿದೆ ಎಂಬ ಮಾತು ಕೇಳಿಬರುತ್ತಿದೆ. ಈ ಘಟನೆಯ ಸಂಪೂರ್ಣ ವಿವರಗಳು  ತಿಳಿದು ಬಂದಿಲ್ಲ. ಘಟನೆಯ ಕುರಿತು ಚಲನಚಿತ್ರ ನಿರ್ಮಾಣ ಕಂಪನಿ ಇನ್ನೂ ಯಾವುದೇ ಅಧಿಕೃತ ಹೇಳಿಕೆ  ಬಿಡುಗಡೆ ಮಾಡಿಲ್ಲ.

Be the first to comment

Leave a Reply

Your email address will not be published. Required fields are marked *

Translate »
error: Content is protected !!