ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವಾದ ಮಾರ್ಚ್ 17ನ್ನು ಸ್ಫೂರ್ತಿ ದಿನ ಎಂದು ರಾಜ್ಯ ಸರಕಾರದ ವತಿಯಿಂದಲೇ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ,ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ ಸುನೀಲ್ ಕುಮಾರ್ , ಪುನೀತ್ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡಬೇಕೆಂಬುದು ಮಾಡಿದ ಮನವಿಗಳಿಗೆ ಸ್ಪಂದಿಸಿ ಅವರು ಈ ಭರವಸೆ ನೀಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರು ಅಕಾಲಿಕವಾಗಿ ನಮ್ಮನ್ನು ಅಗಲಿದ್ದಾರೆ. ವೈಯಕ್ತಿಕವಾಗಿ ನನಗೆ ಅತ್ಯಂತ ಪ್ರೀತಿಪಾತ್ರ ವ್ಯಕ್ತಿಯಾಗಿದ್ದರು. ನಾಡಿನ ಕೋಟ್ಯಂತರ ಯುವಕರಿಗೆ ಅವರು ಸ್ಪೂರ್ತಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಪುನೀತ್ ಅವರು ಕಳೆದ ವರ್ಷ ಅಕ್ಟೋಬರ್ 29ರಂದು ಹೃದಯಘಾತದಿಂದ ನಿಧನರಾಗಿದ್ದರು.
_____
Be the first to comment