ಮಾರ್ಚ್ 8ಕ್ಕೆ “ರೆಕಾರ್ಡ್ ಬ್ರೇಕ್” ತೆರೆಗೆ

ಚಲದವಾಡ ಶ್ರೀನಿವಾಸರಾವ್ ನಿರ್ಮಿಸಿ, ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಚಿತ್ರ “ರೆಕಾರ್ಡ್ ಬ್ರೇಕ್” ಮಾರ್ಚ್ 8ಕ್ಕೆ ಭಾರತದಾದ್ಯಂತ ಸುಮಾರು 2 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಲಿದೆ.

ಚಿತ್ರದ ಕುರಿತು ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.

ನಾನು ಮೂಲತಃ ಟಿಂಬರ್ ಉದ್ಯಮಿ. ನಮ್ಮ ಸಂಸ್ಥೆಯಿಂದ ಈವರೆಗೂ ನೂರಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ. ಸಾವಿರ ಸಂಖ್ಯೆಗಳಲ್ಲಿ ಅನೇಕ ಭಾಷೆಗಳ ಚಿತ್ರಗಳನ್ನು ವಿತರಣೆ  ಮಾಡಿದ್ದೇವೆ. ದುಡ್ಡು ಮಾಡುವುದಕ್ಕಿಂತ ನೋಡುಗರಿಗೆ ಒಳ್ಳೆಯ ಚಿತ್ರ ಕೊಡುವ ಆಸೆ ನನ್ನದು.  ಈ ಚಿತ್ರದ ಬಗ್ಗೆ ಹೇಳಬೇಕೆಂದರೆ, ಚಂಟಿ ಹಾಗೂ ಬಂಟಿ ಎಂಬ ಅನಾಥ ಹುಡುಗರಿಬ್ಬರು ತಾವು ಅಂದುಕೊಂಡದ್ದನ್ನು ಹಾಗೂ ಯಾರು ನಿರೀಕ್ಷಿಸದ್ದನ್ನು ಸಾಧಿಸುವ ಕಥೆಯಿದು. ಖ್ಯಾತ ನಟಿ ಜಯಸುಧಾ ಅವರ ಪುತ್ರ ನಿಹಾರ್ ಹಾಗೂ ಹೊಸ ಪ್ರತಿಭೆ ನಾಗಾರ್ಜುನ ಚಂಟಿ ಹಾಗೂ ಬಂಟಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಎಂದರು ಚಲದವಾಡ ಶ್ರೀನಿವಾಸರಾವ್.

ರಗ್ದಾ ಇಫ್ತೇಕರ್ ಈ ಚಿತ್ರದ ನಾಯಕಿ. ಸತ್ಯಕೃಷ್ಣ, ಸಂಜನಾ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರ ಮಾರ್ಚ್‌ 8ರಂದು ಮಹಾ ಶಿವರಾತ್ರಿ ದಿನದಂದು ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಭೋಜಪುರಿ, ಬೆಂಗಾಲಿ, ಒಡಿಯಾ ಭಾಷೆಗಳಲ್ಲಿ ಏಕಕಾಲಕ್ಕೆ ಭಾರತದಾದ್ಯಂತ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರ ಗಳಲ್ಲಿ ಬಿಡುಗಡೆಯಾಗಲಿದೆ. ಉತ್ತಮ ಕಥಾಹಂದರ ಹೊಂದಿರುವ ಈ ಚಿತ್ರವನ್ನು ನೋಡಿ,  ಹಾರೈಸಿ ಎಂದರು.

ನಾಯಕರಾದ ನಿಹಾರ್, ನಾಗಾರ್ಜುನ, ನಾಯಕಿ ರಗ್ದಾ ಇಫ್ತೇಕರ್, ನಟಿ ಸತ್ಯಕೃಷ್ಣ ಹಾಗೂ ನಟ ಪ್ರಸನ್ನ ಕುಮಾರ್ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!