ಸ್ಟಾರ್ ಜೋಡಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣಇಂದು ತೆಲುಗು ಸಂಪ್ರದಾಯದಂತೆ ವಿವಾಹವಾಗಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿರುವ ಐಶಾರಾಮಿ ರೆಸಾರ್ಟ್‌ನಲ್ಲಿ ಇಂದು ಬೆಳಗಿನ ಶುಭ ಮುಹೂರ್ತದಲ್ಲಿವಿರೋಶ್ ವಿವಾಹ ಸಂಭ್ರಮ ನಡೆದವು. ತೆಲುಗು ಸಂಪ್ರದಾಯದಂತೆ ಕುಟುಂಬ ಸದಸ್ಯರು, ಆಪ್ತ ಸ್ನೇಹಿತರು ಹಾಗೂ ಹಿರಿಯರ ಸಮ್ಮುಖದಲ್ಲಿ ವಿಜಯ್ ದೇವರಕೊಂಡ ಅವರು ರಶ್ಮಿಕಾ ಮಂದಣ್ಣಗೆ ತಾಳಿ ಕಟ್ಟುವ ಮೂಲಕ ಸಪ್ತಪದಿ ತುಳಿದಿದ್ದಾರೆ.
ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ ಈಗ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ವಿವಾಹ ಪೂರ್ವ ಶಾಸ್ತ್ರಗಳು ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಹಳದಿ ಹಾಗೂ ಸಂಗೀತ್ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿದ್ದವು. ತೆಲಂಗಾಣದಿಂದ ಬಂದಿದ್ದ ಪುರೋಹಿತರ ತಂಡ ತೆಲುಗು ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿಸಿದೆ.
ಸಂಜೆ ವೇಳೆಗೆ ಕೊಡವ ಸಂಪ್ರದಾಯದಂತೆ ಮತ್ತೊಮ್ಮೆ ವಿವಾಹ ಶಾಸ್ತ್ರ ನಡೆಯಲಿದೆ. ಎರಡೂ ಕುಟುಂಬಗಳ ಸಂಪ್ರದಾಯಗಳನ್ನು ಗೌರವಿಸುವ ಉದ್ದೇಶದಿಂದ ಎರಡು ಕುಟುಂಬಗಳ ಶಾಸ್ತ್ರ ನಡೆಯಲಿದೆ.
ಮದುವೆಯ ಅಧಿಕೃತ ಫೋಟೋಗಳನ್ನು ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಹಂಚಿಕೊಂಡಿಲ್ಲ. ಮಾರ್ಚ್ 4 ರಂದು ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ.
—-





Be the first to comment