Martin: ಡಿಸೆಂಬರ್ 22ಕ್ಕೆ ಮಾರ್ಟಿನ್ ತೆರೆಗೆ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟಿಸಿರುವ ಮಾರ್ಟಿನ್ ಚಿತ್ರ ಡಿಸೆಂಬರ್ 22 ರಂದು ತೆರೆ ಕಾಣಲಿದೆ.

ಚಿತ್ರ ತಂಡ ಈ ಬಗ್ಗೆ ಘೋಷಣೆ ಮಾಡಿದ್ದು, ಬಹು ನಿರೀಕ್ಷಿತ ಚಿತ್ರ ಮಾರ್ಟಿನ್ ಬಿಡುಗಡೆ ದಿನಾಂಕ ತಿಳಿದು ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಎಪಿ ಅರ್ಜುನ್ ನಿರ್ದೇಶನದ ಈ ಚಿತ್ರ ಟೀಸರ್ ಮೂಲಕ ಸಾಕಷ್ಟು ಸುದ್ದಿ ಮಾಡಿದೆ. ವೈಭವಿ ಶಾಂಡಿಲ್ಯ ನಾಯಕಿ ಆಗಿ ನಟಿಸಿರುವ ಈ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ಚಿತ್ರದಲ್ಲಿ ಅನ್ವೇಶಿ ಜೈನ್, ಸುಕೃತಾ ವಾಗ್ಲೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಉದಯ್ ಕೆ ಮೆಹ್ತಾ ಅವರು ವಾಸವಿ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಮಣಿ ಶರ್ಮಾ ಸಂಗೀತ ಸಂಯೋಜನೆ, ರವಿ ಬಸ್ರೂರ್ ಹಿನ್ನೆಲೆ ಸಂಗೀತವನ್ನು ನೀಡಿದ್ದಾರೆ.

ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ, ಕೆಎಂ ಪ್ರಕಾಶ್ ಸಂಕಲನ, ಸ್ಟಂಟ್ ಕೊರಿಯೋಗ್ರಾಫರ್ ಗಳಾದ ರಾಮ್-ಲಕ್ಷ್ಮಣ್ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!