ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರದ ಟೀಸರ್ ನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡಿ ಚಿತ್ರತಂಡಕ್ಕೆ ಶಾಕ್ ನೀಡುವ ಯತ್ನ ಮಾಡಿದ್ದಾರೆ.
ಟೀಸರ್ ಬಿಡುಗಡೆ ಆದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ಜನ ನೋಡುವ ಮೂಲಕ ಕಡಿಮೆ ಸಮಯದಲ್ಲಿ 10 ಲಕ್ಷ ಜನ ನೋಡಿದ ಟೀಸರ್ ಎಂಬ ಹೆಗ್ಗಳಿಗೆ ಮಾರ್ಟಿನ್ ಪಾತ್ರವಾಗಿತ್ತು. ಸಿನಿಮಾದ ಟೀಸರ್ ಈ ಮಟ್ಟಕ್ಕೆ ರಿಚ್ ಆಗಿರುವುದನ್ನು ಸಹಿಸದ ಕಿಡಿಗೇಡಿಗಳು ಹ್ಯಾಕ್ ಮಾಡುವ ಮೂಲಕ ಮಾರ್ಟಿನ್ ಚಿತ್ರತಂಡಕ್ಕೆ ಆಘಾತವನ್ನು ನೀಡಿದ್ದಾರೆ. ನಿರ್ಮಾಪಕ ಉದಯ್ ಕೆ ಮೆಹ್ತಾ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಡ ಸಿನಿಮಾ ಟೀಸರ್ಗೆ ಇಷ್ಟು ದೊಡ್ಡ ಮಟ್ಟದಲ್ಲಿ ಮನ್ನಣೆ ಸಿಕ್ಕಿರೋದು ನಮಗೆ ಹೆಮ್ಮೆ. ಇದನ್ನು ಸಹಿಸದ ಕಿಡಿಗೇಡಿಗಳು ಟೀಸರ್ ಹ್ಯಾಕ್ ಮಾಡಿರೋದು ಬಹಳ ನೋವಿನ ಸಂಗತಿ. ಇದು ಬೇರೆ ಸಿನಿಮಾಗಳಿಗೆ ತೊಂದರೆ ಆಗಬಾರದು ಅಂತ ನಾನು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದೇನೆ” ಎಂದು ಉದಯ್ ಕೆ ಮೆಹ್ತಾ ಹೇಳಿದ್ದಾರೆ.
ಚಿತ್ರದಲ್ಲಿ ದೇಶ ಪ್ರೇಮ, ಲವ್ ಸ್ಟೋರಿ, ಫ್ಯಾಮಿಲಿ ಕಥೆ ಇದೆ. ಧ್ರುವ ಸರ್ಜಾ ಜೋಡಿಯಾಗಿ ವೈಭವಿ ಶಾಂಡಿಲ್ಯಾ ನಟಿಸಿದ್ದು, ಅನ್ವೇಶಿ ಜೈನ್, ನಿಕಿತೀನ್ ಧೀರ್ ಸೇರಿದಂತೆ ದೊಡ್ಡ ತಾರ ಬಳಗ ಈ ಚಿತ್ರದಲ್ಲಿದ್ದಾರೆ.
ಬೆಂಗಳೂರು, ಉತ್ತರ ಭಾರತದ ಕಾಶ್ಮೀರದ ಸುಂದರ ತಾಣಗಳಲ್ಲಿ ಮಾರ್ಟಿನ್ ಚಿತ್ರದ ಶೂಟಿಂಗ್ ಮಾಡಲಾಗಿದೆ. ಕಾಶ್ಮೀರದ ಐಸ್‌ವಾರ್ ಸಾಹಸ ದೃಶ್ಯಗಳ ಜೊತೆಗೆ ರೋಮಾಂಚನಕಾರಿ ಸ್ಕೇಟಿಂಗ್ ಆಯಕ್ಷನ್ ಸೀನ್‌ಗಳು ಚಿತ್ರದಲ್ಲಿದೆ. ಸಿನಿಮಾದ ಕ್ಲೈಮ್ಯಾಕ್ಸ್ ಸನ್ನಿವೇಶಗಳನ್ನು ಸಾಹಸ ನಿರ್ದೇಶಕರಾದ ರವಿವರ್ಮ ಹಾಗೂ ರಾಮ್ ಲಕ್ಷ್ಮಣ್ ಕಂಪೋಸ್ ಮಾಡಿದ್ದಾರೆ.
ಈ ಚಿತ್ರಕ್ಕೆ ತೆಲುಗಿನ ಹೆಸರಾಂತ ಮ್ಯೂಸಿಕ್ ಡೈರೆಕ್ಟರ್ ಮಣಿಶರ್ಮಾ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ರವಿ ಬಸ್ರೂರ್ ಈ ಚಿತ್ರತಂಡದ ಜೊತೆ ಕೈ ಜೋಡಿಸಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಮಹೇಶ್ ರೆಡ್ಡಿ ಅವರ ಸಂಕಲನ ಚಿತ್ರಕ್ಕಿದೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಮಾರ್ಟಿನ್ ಚಿತ್ರ ಬಿಡುಗಡೆಯಾಗಲಿದೆ.
—–
Be the first to comment