ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್ ಫೆ.23ಕ್ಕೆ ರಿಲೀಸ್ ಆಗಲಿದೆ.
ಎ.ಪಿ. ಅರ್ಜುನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಮಾರ್ಟಿನ್’ ಚಿತ್ರವನ್ನು ವಾಸವಿ ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಉದಯ್ ಕೆ.ಮೆಹ್ತಾ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಕಳೆದ ಸೆಪ್ಟೆಂಬರ್ 30ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ ಶೂಟಿಂಗ್ ವಿಳಂಬ ಆಗಿದ್ದರಿಂದ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿತ್ತು.
ಈ ಹಿಂದೆ ಎ.ಪಿ. ಅರ್ಜುನ್ ಹಾಗೂ ಧ್ರುವ ಇಬ್ಬರೂ ‘ಅದ್ದೂರಿ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಇಬ್ಬರೂ ಮತ್ತೊಮ್ಮೆ ಒಂದಾಗಿರುವುದು ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ‘ಮಾರ್ಟಿನ್’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ.
ಧ್ರುವ ಸರ್ಜಾ ಅವರು ಜೋಗಿ ಪ್ರೇಮ್ ಅವರ ‘ಕೆಡಿ’ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಸಂಜಯ್ ದತ್ ಕೂಡ ಇದ್ದಾರೆ. ಈ ಚಿತ್ರದ ಟೈಟಲ್ ಅನಾವರಣ ಅದ್ದೂರಿಯಾಗಿ ಆಗಿದ್ದು, ಚಿತ್ರದ ಶೂಟಿಂಗ್ ಕೆಲಸಗಳು ಭರದಿಂದ ಸಾಗುತ್ತಿವೆ.
‘ಮಾರ್ಟಿನ್’ ರಿಲೀಸ್ ಆದ ಬಳಿಕ ಧ್ರುವ ಸರ್ಜಾ, ಪೂರ್ಣವಾಗಿ ‘ಕೆಡಿ’ ಚಿತ್ರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
___

Be the first to comment