‘ಮಾರುತ’ ಬಿಡುಗಡೆ ದಿನಾಂಕ ಮುಂದಕ್ಕೆ

ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಅಭಿನಯದ ‘ಮಾರುತ’ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರಮಂದಿರಗಳ ಕೊರತೆಯಿಂದಾಗಿ ಮುಂದೂಡಲಾಗಿದೆ.

ಅಕ್ಟೋಬರ್ 31 ರಂದು ಬಿಡುಗಡೆಯಾಗಬೇಕಿದ್ದ ‘ಮಾರುತ’  ಚಿತ್ರವು  ನವೆಂಬರ್ 21 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಸಾಮಾಜಿಕ ಜಾಲತಾಣ ಬಳಕೆ ಕುರಿತು ಜಾಗೃತಿ ಮೂಡಿಸುವ ಕಮರ್ಷಿಯಲ್ ಸಿನಿಮಾ ಇದಾಗಿದೆ.

ಈಶಾ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ ಮಂಜು ಮತ್ತು ರಮೇಶ್ ಯಾದವ್ ನಿರ್ಮಿಸಿರುವ  ಚಿತ್ರಕ್ಕೆ  ಕಲಾ ಸಾಮ್ರಾಟ್ ಎಸ್ ನಾರಾಯಣ್ ಚಿತ್ರಕಥೆ, ಸಂಭಾಷಣೆ, ಹಾಡು ಬರೆದಿದ್ದು, ನಿರ್ದೇಶನವನ್ನೂ ಮಾಡಿದ್ದಾರೆ. ಶ್ರೇಯಸ್ ಮಂಜುಗೆ ಬೃಂದಾ ಆಚಾರ್ಯ ಜೋಡಿಯಾಗಿದ್ದಾರೆ. ಸಾಧು ಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ, ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ  ಇತರರು ನಟಿಸಿದ್ದಾರೆ. ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್  ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ಪಿಕೆಹೆಚ್ ದಾಸ್ ಛಾಯಾಗ್ರಾಹಕ, ಶಿವಪ್ರಸಾದ್ ಯಾದವ್ ಸಂಕಲನಕಾರ, ವಿನೋದ್ ಮತ್ತು ಅರ್ಜುನ್ ಸಾಹಸ ದೃಶ್ಯ ನಿರ್ದೇಶನ, ಮೋಹನ್ ಕುಮಾರ್ ಮತ್ತು ಸಂತು ನೃತ್ಯ ನಿರ್ದೇಶನ,  ಎಸ್ ನಾರಾಯಣ್ ಮತ್ತು ಜಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!