Mary: ‘ಮೇರಿ’ ಫೆಬ್ರವರಿ 24ಕ್ಕೆ ತೆರೆಗೆ

ಮನೋಜ್ ಪಿ ನಡಲುಮನೆ ನಿರ್ದೇಶನದ ಎರಡನೇ ಸಿನಿಮಾ ‘ಮೇರಿ’ ಫೆಬ್ರವರಿ 24ಕ್ಕೆ ತೆರೆಗೆ ಬರಲಿದೆ.

‘ಮೇರಿ’ ಪಶ್ಚಿಮ ಘಟ್ಟದ ಗ್ರಾಮಾಂತರ ಠಾಣೆಯಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದೆ. ವಿಕಾಶ್ ಉತ್ತಯ್ಯ, ಅನೂಷ ಕೃಷ್ಣ, ಚೇತನ್ ವಿಕ್ಕಿ, ತೇಜಸ್ವಿನಿ ಶರ್ಮಾ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸಂದೀಪ್ ನೀನಾಸಂ, ಭಾರ್ಗವ್ ವೆಂಕಟೇಶ್, ಸುಶಾಂತ್, ದೀಪಕ್ ಗೌಡ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ.

ನಿರ್ದೇಶಕ ಮನೋಜ್ ಪಿ ನಡುಲುಮನೆ, ‘ಮೇರಿ’ ಒಂದು ತಂಡದ ಪರಿಶ್ರಮ. ಥ್ರಿಲ್ಲರ್ ಸಬ್ಜೆಕ್ ಸಿನಿಮಾ ಆಗಿದೆ. ಪೊಲೀಸ್ ಠಾಣೆಯಲ್ಲಿ ನಡೆಯುವ ಘಟನೆ ಚಿತ್ರದಲ್ಲಿದೆ. ಫೆಬ್ರವರಿ 24ರಂದು ಸಿನಿಮಾ ಬಿಡುಗಡೆಯಾಗುತ್ತಿದೆ ಎಂದಿದ್ದಾರೆ.

ಚಿಕ್ಕಮಗಳೂರಿನ ಜಿಲ್ಲೆಯ ಕಾಡು ಮಧ್ಯದಲ್ಲಿರುವ ಒಂದು ಗ್ರಾಮದ ಪೊಲೀಸ್ ಠಾಣೆಗೆ ಹೊಸದಾಗಿ ಅಪಾಯಿಂಟ್ ಆದ ಎಸ್‌ಐ ಮುಂದೆ ಒಂದು ಹುಡುಗಿ ತನ್ನ ಮೇಲೆ ರೇಪ್ ಆಗಿದೆ ಎಂದು ಹೇಳಿದಾಗ ಆ ದಿನ ಏನೇನು ಘಟನೆ ನಡೆಯುತ್ತೆ ಅನ್ನೋದು ಈ ಸಿನಿಮಾದ ಎಳೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾ ನೋಡಿ ಚಿತ್ರತಂಡಕ್ಕೆ ಸಪೋರ್ಟ್ ಮಾಡಿ ಎಂದು ಕೋರಿದ್ದಾರೆ.

ವಿನೋದ್ ಭಾರತಿ ಛಾಯಾಗ್ರಹಣ, ಸೂರಜ್ ಜೋಯ್ಸ್ ಸಂಗೀತ ನಿರ್ದೇಶನ, ನಾಗೇಂದ್ರ ಉಜ್ಜನಿ ಸಂಕಲನ ಚಿತ್ರಕ್ಕಿದೆ. ಡಿಕೆಎಸ್ ಸ್ಟುಡಿಯೋಸ್ ಬ್ಯಾನರ್ ನಡಿ ರನ್ವಿತ್ ಶಿವಕುಮಾರ್, ಹರೀಶ್ ಜಿ.ಬಿ ಮೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!