ಮೇಘನಾ ರಾಜ್ ಸರ್ಜಾ ಬಹಳ ದಿನಗಳ ನಂತರ ನಟನೆಗೆ ಮರಳಿರುವ ಚಿತ್ರ “ತತ್ಸಮ ತದ್ಭವ”ದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ.
ಫೆಬ್ರವರಿ 19 ರಂದು “ತತ್ಸಮ ತದ್ಭವ” ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನೂರಕ್ಕೂ ಹೆಚ್ಚು ನಟನಟಿಯರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಿದ್ದಾರೆ.
ಪ್ರಪಂಚದಾದ್ಯಂತ 30 ಕ್ಕೂ ಹೆಚ್ಚಿನ ದೇಶಗಳಲ್ಲಿರುವ ಕನ್ನಡ ಹಾಗೂ ಇತರ ಸಂಘಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಪ್ರೋತ್ಸಾಹ ನೀಡಿವೆ.
ನಿರ್ದೇಶಕ ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ.
ಚಿತ್ರದ ಹಾಡುಗಳಿಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಶ್ರೀನಿವಾಸ್ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಸಂಕಲನ, ನಿಖಿತ ಪ್ರಿಯ ವಸ್ತ್ರವಿನ್ಯಾಸ ಹಾಗೂ ಸಂತೋಷ್ ಪಂಚಾಲ್ ಕಲಾ ನಿರ್ದೇಶನ ಚಿತ್ರಕ್ಕಿದೆ.
___





Be the first to comment