ಮಾರ್ಚ್ 15ಕ್ಕೆ ‘ಮೆಹಬೂಬಾ’

ನೂಪ್‌ ಆಂಟೋನಿ ನಿರ್ದೇಶನದ ‘ಮೆಹಬೂಬಾ’ ಚಿತ್ರ ಮಾರ್ಚ್ 15 ರಂದು ರಾಜ್ಯದಾದ್ಯಂತ  ಬಿಡುಗಡೆಯಾಗುತ್ತಿದೆ.

ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ʼಬಿಗ್ ಬಾಸ್ ಸೀಸನ್ 6′ ರ ವಿಜೇತ ಶಶಿ ನಾಯಕ ನಟನಾಗಿದ್ದು, ಅವರಿಗೆ ಜೋಡಿಯಾಗಿ ಪಾವನ ಗೌಡ ಅಭಿನಯಿಸಿದ್ದಾರೆ. ಶ್ರೀ ಭೈರವೇಶ್ವರ ಎಂಟರ್ಪ್ರೈಸಸ್ ಬ್ಯಾನರ್ ನಡಿ ಪ್ರಸನ್ನ ಶ್ರೀನಿವಾಸ್ ‘ಮೆಹಬೂಬಾ’ ನಿರ್ಮಾಣ ಮಾಡಿದ್ದಾರೆ.

ನಿರ್ದೇಶಕ ಅನೂಪ್ ಆಂಟೋನಿ, ” ಮೆಹಬೂಬಾ ನನ್ನ ಎರಡನೇ ಸಿನಿಮಾ.  ಲವ್ ಸ್ಟೋರಿ ಸಿನಿಮಾ ಮೂಲಕ ಶಶಿ ಸರ್ ಲಾಂಚ್ ಆಗುತ್ತಿದ್ದಾರೆ. ಪವನ ಮೇಡಂ ಅದ್ಭುತ ನಟನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಮಾರ್ಡನ್ ರೈತ ಎಂದು ಖ್ಯಾತಿ ಪಡೆದಿರುವ ಶಶಿ ‘ಮೆಹಬೂಬಾ’ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಾಯಕನಾಗಿ ಈ ಚಿತ್ರದಲ್ಲಿ ಬಣ್ಣ ಹಚ್ಚುವುದರ ಜೊತೆಗೆ ಶಶಿ ನಿರ್ಮಾಪಕನಾಗಿಯೂ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಕೇರಳದಲ್ಲಿ ನಡೆದ ನೈಜ ಘಟನೆಯೊಂದನ್ನು ಆಧರಿಸಿ ಈ ಚಿತ್ರ ಸಿದ್ಧವಾಗುತ್ತಿದೆ. ಒಟ್ಟು 5 ಹಾಡುಗಳಿವೆ.

ಹಾಡುಗಳನ್ನು ಯೋಗರಾಜ್ ಭಟ್ ಹಾಗೂ ರಘು ಶಾಸ್ತ್ರೀ ರಚಿಸಿದ್ದಾರೆ. ಮನು ಸಂಗೀತ ಸಂಯೋಜನೆ ಮಾಡಿದ್ದಾರೆ.ಸಂಭಾಷಣೆಯನ್ನು ರಘು ಶಾಸ್ತ್ರೀ ಬರೆದಿದ್ದಾರೆ.

ಕಿರಣ್ ಹಂಪಾಪುರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ಕಲೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ಆಗಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!