49 ವರ್ಷಗಳ ಹಿಂದೆ…ಕೆಲಸಕ್ಕಾಗಿ ಪಟ್ಟಣ ಸೇರುವ ಎಷ್ಟೋ ಯುವಕರು ಒಂದೇ ಒಂದು ಸಿನಿಮಾದಿಂದ ಬದಲಾಗಿ ಕೃಷಿಗೆ ಆದ್ಯತೆ ಕೊಡಲಾರಂಭಿಸಿದ್ರು. ಅದಕ್ಕೆ ಕಾರಣವಾಗಿದ್ದು ಡಾ.ರಾಜ್ಕುಮಾರ್ ನಟಿಸಿದ ಬಂಗಾರದ ಮನುಷ್ಯ ಚಿತ್ರ. ಕನ್ನಡ ಚಿತ್ರರಂಗವನ್ನು ಮಾತ್ರ ಅಲ್ಲ, ಕನ್ನಡಿಗರಲ್ಲಿ ಹೊಸ ಕ್ರಾಂತಿ ಮೂಡಿಸಿದ ಈ ಸಿನಿಮಾ ಕುರಿತ ‘ಮೇಕಿಂಗ್ ಆಫ್ ಬಂಗಾರದ ಮನುಷ್ಯ’ ಕೃತಿಯನ್ನು ಪತ್ರಕರ್ತ ಮಹೇಶ್ ದೇವಶೆಟ್ಟಿ ಬರೆದಿದ್ದಾರೆ. ಅಣ್ಣಾವ್ರ 92ನೇ ಹುಟ್ಟುಹಬ್ಬದಂದು ಏಪ್ರಿಲ್ 24ರಂದು ಈ ಪುಸ್ತಕವನ್ನು ‘ಪಬ್ಲಿಕ್ ಟಿವಿ’ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್ ಬಿಡುಗಡೆ ಮಾಡಿದರು. ಡಾ.ಶಿವರಾಜ್ಕುಮಾರ್ ಶುಭ ಹಾರೈಸಿದರು.
ಕೆಲವೊಂದು ಸಿನಿಮಾಗಳೇ ಹಾಗೆ ಬಂಗಾರದ ಅಕ್ಷರದಲ್ಲಿ ಬರೆಯುವ ಕಥೆಗಳನ್ನು ಹೊಂದಿರುತ್ತವೆ. ಅದರಲ್ಲೂ ಡಾ ರಾಜ್ಕುಮಾರ್ ಚಿತ್ರಗಳ ಪಾಲು ಮೇಲ್ಪಂಕ್ತಿಯಲ್ಲಿರುತ್ತದೆ. ಆ ಸಾಲಿನಲ್ಲಿ ಹೊಳೆಯುವ ಧ್ರುವತಾರೆಯೇ ‘ಬಂಗಾರದ ಮನುಷ್ಯ.’ ಆಗಿನ ಕಾಲದ ಯುವ ಸಮುದಾಯದಲ್ಲಿ ಹೊಸ ಕ್ರಾಂತಿಯನ್ನೇ ಮೂಡಿಸಿದ ಬಂಗಾರದ ಮನುಷ್ಯ ಚಿತ್ರದ ಪ್ರತಿಯೊಂದು ಘಟನೆಯೂ ವಿಸ್ಮಯ ಮೂಡಿಸುವಂಥದ್ದು. ಹಿಂದೆಂದೂ ಕಂಡು ಕೇಳಿರದ ಮಾಹಿತಿಯನ್ನು ಒಳಗೊಂಡ `ಮೇಕಿಂಗ್ ಆಫ್ ಬಂಗಾರದ ಮನುಷ್ಯ”ಪುಸ್ತಕ ಲೋಕಾರ್ಪಣೆಯಾಗಿದೆ. ಪಬ್ಲಿಕ್ ಟಿವಿ ಮುಖ್ಯಸ್ಥರಾಗಿರುವ ಎಚ್.ಆರ್.ರಂಗನಾಥ್ ಬಿಡುಗಡೆ ಮಾಡಿದರು.
ಕನ್ನಡ ಸಿನಿಮಾ ರಂಗದ ಪತ್ರಕರ್ತ ಮಹೇಶ್ ದೇವಶೆಟ್ಟಿ ಬರೆದ ‘ಮೇಕಿಂಗ್ ಆಫ್ ಬಂಗಾರದ ಮನುಷ್ಯ’ ಸಾಕಷ್ಟು ರೋಚಕ ಹಾಗೂ ವಿಶಿಷ್ಟ ಮಾಹಿತಿಗಳನ್ನು ಒಳಗೊಂಡಿದೆ. ಪ್ರಸ್ತುತ ಮಹೇಶ್ ದೇವಶೆಟ್ಟಿ ಪಬ್ಲಿಕ್ ಟಿವಿ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 49 ವರ್ಷಗಳ ಹಿಂದೆ ತೆರೆ ಕಂಡು ಸತತ ಎರಡು ವರ್ಷ ಪ್ರದರ್ಶನ ಕಂಡ ಬಂಗಾರದ ಮನುಷ್ಯ ಚಿತ್ರದ ಕುರಿತ ಅಪರೂಪದ ಮಾಹಿತಿ ಹೆಕ್ಕಿ ತೆಗೆದು ಪುಸ್ತಕ ರೂಪದಲ್ಲಿ ಇಂದಿನ ಜನತೆಗೆ ನೀಡಿದ್ದಾರೆ.
ಅಂದ ಹಾಗೆ ‘ಮೇಕಿಂಗ್ ಆಫ್ ಬಂಗಾರದ ಮನುಷ್ಯ’ ಕೃತಿಗೆ ಹ್ಯಾಟ್ರಿಕ್ ಹೀರೋ ಶಿವಣ್ಣ ಬೆನ್ನುಡಿ ಬರೆದು ಶುಭ ಕೋರಿದ್ದಾರೆ. ಅದೇ ಮೇಕಿಂಗ್ ಆಫ್ ಬಂಗಾರದ ಮನುಷ್ಯ ಕೃತಿಯನ್ನು ಪಬ್ಲಿಕ್ ಟಿವಿ ಕಛೇರಿಯಲ್ಲಿಯೇ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್ ಅನಾವರಣಗೊಳಿಸಿದರು. ಸಂಪಾದಕರಾದ ದಿವಾಕರ್ ಹಾಗೂ ಔಟ್ಪುಟ್ ಚೀಫ್ ಆನಂದ್ ಮತ್ತು ಲೇಖಕ ಮಹೇಶ್ ದೇವಶೆಟ್ಟಿ ಉಪಸ್ಥಿತಿಯಿದ್ದರು. ಈ ಮೂಲಕ ಇಂದಿನ ಸಿನಿಮಾ ಪತ್ರಕರ್ತರಿಗೂ ಹಾಗೂ ಸಿನಿ ಪ್ರಿಯರಿಗೂ ಇಷ್ಟವಾಗುವ ಅನೇಕ ಸಂಗತಿ ಒಳಗೊಂಡ `ಮೇಕಿಂಗ್ ಆಫ್ ಬಂಗಾರದ ಮನುಷ್ಯ’ ದಿವ್ಯ ಕಥನ ಲೋಕಾರ್ಪಣೆಯಾಗಿದೆ.
Be the first to comment