ಮಹಾಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಭೋಸ್ಲೆ ಗರ್ಭಿಣಿಯಾಗಿರುವುದಾಗಿ ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಮೊನಾಲಿಸಾ ಪತಿ ಫರ್ಮಾನ್ ಖಾನ್ ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ವಿವಾಹವಾಗಿದ್ದ ಈ ಜೋಡಿಯ ಮದುವೆಯ ವಯಸ್ಸಿನ ಕುರಿತು ಪ್ರಕರಣ ದಾಖಲಾಗಿದೆ. ಮೊನಾಲಿಸಾ ಅಪ್ರಾಪ್ತೆ ಆಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಮೊನಾಲಿಸಾ ಗರ್ಭಿಣಿ ಆಗಿರುವ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪತಿ ತಿಳಿಸಿದ್ದಾರೆ.
ಈ ವರ್ಷದ ಮಾರ್ಚ್ ತಿ ಗಳ 11ರಂದು ಕೇರಳದ ಪೂವಾರ್ನ ಅರುಮಾನೂರ್ ನೈನಾರ್ ದೇವಸ್ಥಾನದಲ್ಲಿ ಈ ಜೋಡಿ ಮದುವೆಯಾಗಿತ್ತು. ಬಳಿಕ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಮಹೇಶ್ವರ ಪೊಲೀಸ್ ಠಾಣೆಯಲ್ಲಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಪೊಲೀಸರುವೈದ್ಯಕೀಯ ದೃಢೀಕರಣ ಪಡೆಯುವ ಸಾಧ್ಯತೆಯಿದೆ. ಪ್ರಕರಣದ ಮುಂದಿನ ಪ್ರಕ್ರಿಯೆ ಆ ಬಳಿಕ ನಿರ್ಧಾರವಾಗಲಿದೆ.
ಇದೇ ವೇಳೆ ಕೇರಳ ಹೈಕೋರ್ಟ್ ದಂಪತಿಗೆ ಮಧ್ಯಂತರ ರಕ್ಷಣೆ ನೀಡಿ ಮೇ 20ರವರೆಗೆ ಫರ್ಮಾನ್ ಖಾನ್ ಬಂಧನಕ್ಕೆ ತಡೆ ನೀಡಿದೆ.





Be the first to comment