ಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ಫೆಬ್ರವರಿ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ. ಸರೋವರ್ ಅವರು ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ.
ನಿವೃತ್ತ ಆರ್ಮಿ ಆಫೀಸರ್ ಕರ್ನಲ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಗೋಪಿಚಂದ್, ಲಾಲ್ ಚಂದ್ ಖತಾರ್ ಮತ್ತು ಸರೋವರ್ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನಿರ್ಮಾಪಕರೆಲ್ಲಾ ಈ ಚಿತ್ರದಲ್ಲಿ ನಟನೆ ಮಾಡಿರುವುದು ವಿಶೇಷ.
ಕಾರ್ತಿಕ್ ಶರ್ಮ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಕ್ಲೈಮಾಕ್ಸ್ ಛಾಯಾಗ್ರಹಣ ದೀಪಕ್ ಹಾಗೂ ಧನುಷ್ ಬೆದ್ರೆ ಅವರ ಸಂಕಲನ ಹರ್ಷವರ್ಧನ್ ಏ ಎಲ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್, ಟ್ರೇಲರ್ ಜನರ ಮನ ತಲುಪಿದೆ. ಕೆ.ಆರ್.ಜಿ ಸ್ಟುಡಿಯೋಸ್ “ಮಾಂಕ್ ದಿ ಯಂಗ್” ಚಿತ್ರ ವಿತರಣೆ ಮಾಡುತ್ತಿದೆ.

Be the first to comment