ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ಫೆಬ್ರವರಿ ಮಧ್ಯ ಅಥವಾ ಕೊನೆವಾರದಲ್ಲಿ ಬಿಡುಗಡೆಯಾಗಲಿದೆ.
ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರದಿಂದ “ಮಾಯೆ” ಎಂಬ ಮನಮೋಹಕ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪ್ರತಾಪ್ ಭಟ್ ಬರೆದಿರುವ ಈ ಹಾಡನ್ನು ಸಿರಿ ಕಟ್ಟೆ ಹಾಡಿದ್ದಾರೆ. ಸ್ವಾಮಿನಾಥನ್ ಸಂಗೀತ ನೀಡಿದ್ದಾರೆ.
“ಮಾಂಕ್ ದಿ ಯಂಗ್” ವಿಂಟೇಜ್ ಫ್ಯಾಂಟಸಿ ಜಾನರ್ ನ ಕಥಾಹಂದರ ಹೊಂದಿರುವ ಚಿತ್ರ. 1869 ನೇ ಇಸವಿಯಿಂದ ಚಿತ್ರದ ಕಥೆ ಆರಂಭವಾಗುತ್ತದೆ. ವಿವಿಧ ಕಾಲಘಟ್ಟಗಳ ಕಥೆಯನ್ನು ಇದರಲ್ಲಿ ತೋರಿಸಲಾಗಿದೆ. ಪ್ರೇಕ್ಷಕ ಸ್ವಲ್ಪ ಯೋಚಿಸಿದಾಗ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಗುತ್ತದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದು ನಿರ್ದೇಶಕ ಮಾಸ್ಚಿತ್ ಸೂರ್ಯ ತಿಳಿಸಿದ್ದಾರೆ.
“ಮಾಂಕ್ ದಿ ಯಂಗ್” ಚಿತ್ರದ ನಾಯಕ ಸರೋವರ್, ನಾಯಕಿ ಸೌಂದರ್ಯ ಗೌಡ, ಛಾಯಾಗ್ರಾಹಕ ಕಾರ್ತಿಕ್ ಶರ್ಮ, ಸಂಗೀತ ನಿರ್ದೇಶಕ ಸ್ವಾಮಿನಾಥನ್, ಗಾಯಕಿ ಸಿರಿ ಕಟ್ಟೆ, ಗಾಯಕ ರೋಹಿತ್, ಗೀತರಚನೆಕಾರ ಪ್ರತಾಪ್ ಭಟ್, ಕಲಾವಿದರಾದ ಕೃತಿ, ರವಿ ಶಂಕರ್, ಸಾರಸ್ ಮಂಜುನಾಥ್, ರವಿ ಮಟ್ಟಿ, ಸುಮಂತ್,ಶಿವಪ್ಪ ಮುಂತಾದವರು “ಮಾಂಕ್ ದಿ ಯಂಗ್” ಚಿತ್ರದ ಕುರಿತು ಮಾತನಾಡಿದರು.
ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರ ನಿರ್ಮಾಣಕ್ಕೆ ಕರ್ನಲ್ ರಾಜೇಂದ್ರನ್, ಗೋಪಿಚಂದ್ ಹಾಗೂ ಲಾಲ್ ಚಂದ್ ಖತಾರ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳ ಹಾಗೂ ಸರೋವರ್ ಸಾಥ್ ನೀಡಿದ್ದಾರೆ.
Be the first to comment