ಜಿಗರ್:
ಸೂರಿ ಕುಂದರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಜಿಗರ್’ ಇಂದು ತೆರೆ ಕಾಣುತ್ತಿದೆ. ಪ್ರವೀಣ್ ತೇಜ್ ಅವರಿಗೆ ನಾಯಕಿಯಾಗಿ ವಿಜಯಶ್ರೀ ನಟಿಸಿದ್ದಾರೆ.
ಯು.ಕೆ .ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ‘ಜಿಗರ್’ ನಿರ್ಮಿಸಿದ್ದಾರೆ. ವಿನಯಪ್ರಸಾದ್, ಯಶ್ವಂತ್ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ರಿತ್ವಿಕ್ ಮುರಳಿಧರ್ ಸಂಗೀತ, ಶಿವಸೇನ ಛಾಯಾಗ್ರಹಣ, ಜ್ಞಾನೇಶ್ ಮಠದ್ ಸಂಕಲನವಿದೆ.
ಕಾದಾಡಿ:
ನಟ ಶಶಿಕುಮಾರ್ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸಿರುವ ‘ಕಾದಾಡಿ’ ಇಂದು ತೆರೆ ಕಾಣುತ್ತಿರುವ ಮತ್ತೊಂದು ಚಿತ್ರ. ಸತೀಶ್ ಮಾಲೆಂಪಾಟಿ ನಿರ್ದೇಶಿಸಿರುವ ಚಿತ್ರವನ್ನು ಅರುಣಂ ಫಿಲ್ಮ್ಸ್‌ನಿರ್ಮಾಣ ಮಾಡಿದೆ.
ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್ ನಾಯಕಿಯರು. ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಡಿ.ಯೋಗಿಪ್ರಸಾದ್ ಛಾಯಾಗ್ರಹಣ , ಪ್ರಕಾಶ್‌ತೋಟ ಸಂಕಲನವಿದೆ. ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಮೊದಲಾದೆಡೆ ಚಿತ್ರೀಕರಣಗೊಂಡಿದೆ.
ಕಾಗದ:
ರಂಜಿತ್ ನಿರ್ದೇಶಿಸಿರುವ ‘ಕಾಗದ’ ಇಂದು ತೆರೆ ಕಾಣುತ್ತಿದೆ. ಅರುಣ್ ಕುಮಾರ್ ಆಂಜನೇಯ ಚಿತ್ರ ನಿರ್ಮಿಸಿದ್ದಾರೆ.
2005ರ ಕಾಲಘಟ್ಟದಲ್ಲಿ ನಡೆಯುವ ಪ್ರೇಮಕಥೆ ಕಾಗದ. ಆದಿತ್ಯ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ ಚಿತ್ರದ ನಾಯಕಿ. ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಬಲ ರಾಜವಾಡಿ, ನೀನಾಸಂ ಅಶ್ವಥ್, ಮಠ ಕೊಪ್ಪಳ, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಾಡುಗಳಿಗೆ ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಹಾಗೂ ಪವನ್ ಗೌಡ ಸಂಕಲನ ಚಿತ್ರಕ್ಕಿದೆ.
ಬಿಸಿಬಿಸಿ Ice-Cream:
ಅರವಿಂದ್ ಅಯ್ಯರ್-ಸಿರಿ ರವಿಕುಮಾರ್ ನಟಿಸಿರುವ ‘ಬಿಸಿಬಿಸಿ Ice-Cream’ ಇಂದು ತೆರೆ ಕಾಣುತ್ತಿದೆ.
‘ಕಹಿ’, ‘ಅಳಿದು ಉಳಿದವರು’ ಸಿನಿಮಾ ನಿರ್ದೇಶಿಸಿದ್ದ ಅರವಿಂದ್ ಶಾಸ್ತ್ರಿ ವಿಭಿನ್ನ ಶೀರ್ಷಿಕೆ ಇರುವ ಈ ಸಿನಿಮಾ ನಿರ್ದೇಶಿಸಿದ್ದಾರೆ. ಡಾರ್ಕ್ ಕಾಮಿಡಿ ರೊಮ್ಯಾನ್ಸ್ ಕಥಾಹಂದರದ ಈ ಚಿತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ಬಣ್ಣ ಹಚ್ಚಿದ್ದಾರೆ.
‘ಕ್ಯಾಬ್ ಡ್ರೈವರ್ ಕಥೆಯನ್ನು ನಾವು ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ. ಒಬ್ಬ ಒಂಟಿ ಕ್ಯಾಬ್ ಚಾಲಕನ ಜೀವನದಲ್ಲಿ ಮಿಸ್ಟೀರಿಯಸ್ ಹುಡುಗಿ ಬಂದಾಗ ಏನಾಗುತ್ತದೆ ಎನ್ನುವುದೇ ಸಿನಿಮಾದ ಕಥೆ’ ಎಂದು ನಿರ್ದೇಶಕ ಅರವಿಂದ್ ಹೇಳಿದ್ದಾರೆ.
ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನ, ಎನೋಷ್ ಒಲಿವೇರಾ ಛಾಯಾಗ್ರಹಣ ಚಿತ್ರಕ್ಕಿದೆ.
—–
Be the first to comment