ಕನ್ನಡದ ಖ್ಯಾತ ನಿರ್ದೇಶಕ ಕೆ.ಆರ್.ಮುರಳಿಕೃಷ್ಣ(63) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುರಳಿಕೃಷ್ಣ ಅವರು ಚಿಕಿತ್ಸೆ ಫಲಿಸದೇ ನಿನ್ನೆ ಸಂಜೆ 7.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ನಿರ್ಮಾಪಕರಾಗಿ, ನಿರ್ದೇಶಕರಾಗಿ ಕೆಲಸ ಮಾಡಿದ್ದ ಅವರು ಅಡ್ವಕೇಟ್ ಆಗಿ ವೃತ್ತಿ ಮಾಡುತ್ತಿದ್ದರು. ಮುರಳಿಕೃಷ್ಣ ಅವರಿಗೆ ಬ್ರೇನ್ ಟ್ಯೂಮರ್ ಆಗಿತ್ತು. ಈ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ಅವರಿಗೆ ಹೃದಯಾಘಾತವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮುರಳಿಕೃಷ್ಣ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಸಹಕಾರನಗರದಲ್ಲಿರುವ ನಿವಾಸದಲ್ಲಿ ಮುರಳಿಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮ. 12.30ಕ್ಕೆ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ, ಗರ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳನ್ನು ಕೆ.ಆರ್.ಮುರಳಿಕೃಷ್ಣ ನಿರ್ದೇಶಿಸಿದ್ದರು. ಗರ ಚಿತ್ರಕ್ಕಾಗಿ ಬಾಲಿವುಡ್ ನಟ ಜಾನಿ ಲಿವರ್ ಅವರನ್ನು ಕನ್ನಡಕ್ಕೆ ಕರೆ ತಂದಿದ್ದರು.
ಕೆ.ಆರ್.ಮುರಳಿಕೃಷ್ಣ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
___

Be the first to comment