ಮರ್ಯಾದೆ ಪ್ರಶ್ನೆ ಸಿನಿಮಾ ಮೂಲಕ ಮಿಡಲ್ ಕ್ಲಾಸ್ ಜನರ ಮನಸ್ಥಿತಿ ಮತ್ತು ಅವರ ಪರಿಸ್ಥಿತಿ ಎರಡನ್ನೂ ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದ ನಿರ್ದೇಶಕ ನಾಗರಾಜ ಸೋಮಯಾಜಿ ಈಗ ಹೊಸ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ದೀಪಾವಳಿ ಹಬ್ಬದ ವಿಶೇಷವಾಗಿ ನಾಗರಾಜ ಸೋಮಯಾಜಿ ಅವರ ಹೊಸ ಸಿನಿಮಾದ ಟೈಟಲ್ ಪೋಸ್ಟರ್ ಅನಾವರಣಗೊಂಡಿದೆ.
ಚಿತ್ರಕ್ಕೆ ದೇವಿ ಮಹಾತ್ಮೆ ಎಂಬ ಟೈಟಲ್ ಇಡಲಾಗಿದೆ. ಪೋಸ್ಟರ್‌ನಲ್ಲಿ ಎರಡು ಶೇಡ್ ಗಳನ್ನು ಕಾಣಬಹುದು. ಹಳ್ಳಿ ಹಾಗೂ ಸಮುದ್ರದ ಹಿನ್ನೆಲೆಯಲ್ಲಿ ಪೋಸ್ಟರ್ ನ್ನು ಆಕರ್ಷಕವಾಗಿ ಡಿಸೈನ್ ಮಾಡಲಾಗಿದೆ.
ದೇವಿ ಮಹಾತ್ಮೆ ಟೈಟಲ್ ಕೇಳಿದ ತಕ್ಷಣ ದೇವರ ಸಿನಿಮಾ ಅಂದುಕೊಳ್ಳುವುದು ಸಹಜ. ಆದರೆ ಇದೊಂದು ಕಾಮಿಡಿ ಥ್ರಿಲ್ಲರ್ ಕಥಾಹಂದರ ಚಿತ್ರ. ನಾಗರಾಜ ಸೋಮಯಾಜಿ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಾದಿರಾಜ ಶೆಟ್ಟಿ, ಅರವಿಂದ್ ಕುಪ್ಳೀಕರ್, ಭಾಸ್ಕರ್ ಬಂಗೇರ ಹಾಗೂ ಬಿ ಕಿರಣ್ ಬರವಣಿಗೆಯಲ್ಲಿ ಸಾಥ್ ಕೊಟ್ಟಿದ್ದಾರೆ.






Be the first to comment