ನಾಗಶೇಖರ್ ಹೊಸ ಚಿತ್ರ ‘ಕ್ಯೂ’

ಈಗಾಗಲೇ ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ’ ಚಿತ್ರದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಅದರ ಹಿಂದೆಯೇ ನಾಗಶೇಖರ್ ತಮ್ಮ ಮುಂದಿನ ಪ್ರಾಜೆಕ್ಟನ್ನು ಅನೌನ್ಸ್ ಮಾಡಿದ್ದಾರೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ೩ ಭಾಷೆಗಳಲ್ಲಿ, ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಆ ಚಿತ್ರದ ಹೆಸರು “ಕ್ಯೂ”(Q).

ತಮ್ಮದೇ ಆದ ನಾಗಶೇಖರ್ ಮ್ಯಾಜಿಕ್ಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿರುವ ನಾಗಶೇಖರ್ ಕಥೆ, ಚಿತ್ರಕಥೆಯ ಜೊತೆಗೆ ಸಂಗೀತದ ಜವಾಬ್ದಾರಿಯನ್ನೂ ಸಹ ತಾವೇ ಹೊತ್ತಿದ್ದಾರೆ. ರಾಮ್ ಚಿರು ಲೈನ್ ಪ್ರೊಡ್ಯೂಸರ್ ಆಗಿರುವ ಈ ಚಿತ್ರವನ್ನು ಭಾವನಾ ರವಿ ಅವರು ಪ್ರೆಸೆಂಟ್ ಮಾಡುತ್ತಿದ್ದಾರೆ.

ಈ ಚಿತ್ರದ ಮೂಲಕ ನಾಗಶೇಖರ್ ಅವರು, ಮೈನೆ ಪ್ಯಾರ್ ಕಿಯಾ ಖ್ಯಾತಿಯ ನಟಿ ಭಾಗ್ಯಶ್ರೀ ಅವರ ಪುತ್ರಿ ಅವಂತಿಕಾ ದಸ್ಸಾನಿ ಅವರನ್ನು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಉಪೇಂದ್ರ ಅಣ್ಣನ ಪುತ್ರ ನಿರಂಜನ್ ಚಿತ್ರದ ನಾಯಕ. ಮುಂದಿನ ತಿಂಗಳಿಂದ ಈ ಚಿತ್ರದ ಶೂಟಿಂಗ್ ಆರಂಭವಾಗಲಿದ್ದು, ಡಿ.ಜೆ. ಚಕ್ರವರ್ತಿ ಸಂಭಾಷಣೆ ರಚಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!