ಕನ್ನಡದಲ್ಲಿ ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳೇ ಹೆಚ್ಚಾಗಿ ಜನರನ್ನು ತಲುಪುತ್ತಿದೆ. ಅಂತಹ ಉತ್ತಮ ಹಾಗೂ ವಿಭಿನ್ನ ಕಂಟೆಂಟ್ ಹೊತ್ತು “ನಾಗವಲ್ಲಿ ಬಂಗಲೆ” ನಿರ್ಮಾಣವಾಗಿದೆ. ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ,ಮೋಹ, ಮದ, ಮತ್ಸರ ಈ ಆರು ಗುಣಗಳನ್ನು ಪ್ರತಿನಿಧಿಸುವ ಆರು ಪಾತ್ರಗಳ ಜೊತೆಗೆ ಮತ್ತೊಂದು ವಿಶೇಷ ಪಾತ್ರವಿರುವ “ನಾಗವಲ್ಲಿ ಬಂಗಲೆ” ಚಿತ್ರ ಈ ವಾರ(ಫೆಬ್ರವರಿ 28) ಬಿಡುಗಡೆಯಾಗುತ್ತಿದೆ.
ಈ ಚಿತ್ರವನ್ನು ಹಂಸ ವಿಷನ್ಸ್ ಲಾಂಛನದಲ್ಲಿ ನೆಲ ಮಹೇಶ್ ಮತ್ತು ನೇವಿ ಮಂಜು ನಿರ್ಮಿಸಿದ್ದಾರೆ. ಕವಿ ರಾಜೇಶ ರವರ ನಿರ್ದೇಶನ, ರೋಹನ್ ದೇಸಾಯಿರವರ ಸಂಗೀತ, ಜೆ. ಎಮ್. ಪ್ರಹ್ಲಾದ್ ರವರ ಕಥೆ -ಚಿತ್ರಕಥೆ-ಸಂಭಾಷಣೆ ಈ ಚಿತ್ರಕ್ಕಿದೆ. ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿ ನೆ.ಲ.ನರೇಂದ್ರಬಾಬು, ಯಶ್, ತೇಜಸ್ವಿನಿ, ನೇವಿ ಮಂಜು, ರೂಪಶ್ರೀ ಮುಂತಾದವರಿದ್ದಾರೆ.

Be the first to comment