ಫೆಬ್ರವರಿ 9ಕ್ಕೆ ‘ನಗುವಿನ ಹೂಗಳ ಮೇಲೆ’ ರಿಲೀಸ್

ಅಭಿ ದಾಸ್ ಮತ್ತು ಶರಣ್ಯಾ ಶೆಟ್ಟಿ ನಾಯಕ, ನಾಯಕಿಯರಾಗಿ ನಟಿಸಿರುವ  ‘ನಗುವಿನ ಹೂಗಳ ಮೇಲೆ’ ಚಿತ್ರ  ಫೆಬ್ರವರಿ 9ರಂದು ತೆರೆಗಾಣಲಿದೆ.

ವೆಂಕಟ್ ಭಾರದ್ವಾಜ್ ನಿರ್ದೇಶನದ ಈ ಚಿತ್ರದ ಹಾಡುಗಳು, ಟ್ರೈಲರ್ ಮೂಲಕ ಗಮನ ಸೆಳೆದಿದೆ. ಭಿನ್ನ ಪ್ರೇಮಕಥಾನಕದ ಸುಳಿವಿನೊಂದಿಗೆ ‘ನಗುವಿನ ಹೂಗಳ ಮೇಲೆ’ ಸಾಕಷ್ಟು ಭರವಸೆ ಮೂಡಿಸಿದೆ.

ಈ ಹಿಂದೆ ಆಮ್ಲೆಟ್, ಕೆಂಪಿರ್ವೆ ಮುಂತಾದ ಸಿನಿಮಾಗಳನ್ನು ನಿರ್ದೇಶನ ಮಾಡಿ ಗಮನ ಸೆಳೆದ ವೆಂಕಟ್ ಭಾರದ್ವಾಜ್  ಅವರು ನಗುವಿನ ಹೂಗಳ ಮೇಲೆ ಚಿತ್ರದ ಮೂಲಕ, ಎಲ್ಲ ವಯೋಮಾನ, ಅಭಿರುಚಿಯ ಪ್ರೇಕ್ಷಕರನ್ನೂಸೆಳೆಯಲು ಸಜ್ಜಾಗಿದ್ದಾರೆ.

ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕ ಕೆ.ಕೆ ರಾಧಾ ಮೋಹನ್ ಶ್ರೀ ಸತ್ಯಸಾಯಿ ಆಟ್ರ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಬಲ ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣ ಈ ಚಿತ್ರದಲ್ಲಿದೆ.

ಪ್ರಮೋದ್ ಭಾರತೀಯ ಛಾಯಾಗ್ರಹಣ, ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಚಂದನ್ ಪಿ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಚಿತ್ರದಲ್ಲಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!