‘ನ್ಯಾನೋ ನಾರಾಯಣಪ್ಪ’ ಟ್ರೈಲರ್ ರಿಲೀಸ್

ಕೆಜಿಎಫ್ ತಾತಾ ಎಂದೇ ಪ್ರಸಿದ್ಧಿ ಹೊಂದಿರುವ ಕೃಷ್ಣಾಜಿ ರಾವ್ ನಟನೆಯ ‘ನ್ಯಾನೋ ನಾರಾಯಣಪ್ಪ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಕುಮಾರ್ ನಿರ್ದೇಶನ ಸಾರಥ್ಯದಲ್ಲಿ ‘ನ್ಯಾನೋ ನಾರಾಯಣಪ್ಪ’ ಮೂಡಿ ಬಂದಿದೆ.

ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕೃಷ್ಣಾಜಿ ರಾವ್ ನಟಿಸಿದ್ದಾರೆ. ಫಸ್ಟ್ ಲುಕ್ ಪೋಸ್ಟರ್, ಟೈಟಲ್ ಮೂಲಕ ಗಮನ ಸೆಳೆದ ಚಿತ್ರತಂಡ ಈಗ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಿದೆ.

ಕೆಜಿಎಫ್ ನಲ್ಲಿ ಪುಟ್ಟ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡ ಕೃಷ್ಣಾಜಿ ರಾವ್ ಈ ಚಿತ್ರದಲ್ಲಿ ಇಡೀ ಸಿನಿಮಾ ಆವರಿಸಿಕೊಂಡಿದ್ದಾರೆ. ಕಾಮಿಡಿ ಈ ಚಿತ್ರದ ಮೂಲ ಮಂತ್ರವಾಗಿದ್ದು ಭಾವನಾತ್ಮಕ ಅಂಶಗಳು ಸಿನಿಮಾದಲ್ಲಿವೆ ಎನ್ನುವುದು ಟ್ರೇಲರ್ ನಲ್ಲಿ ತಿಳಿಯುತ್ತದೆ.

ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಕುಮಾರ್ ನಿರ್ಮಾಣ ಮಾಡಿದ್ದಾರೆ. ಶಿವಶಂಕರ ಕ್ಯಾಮೆರಾ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ.

ಕಾಕ್ರೋಚ್ ಸುಧಿ, ಪ್ರಶಾಂತ್ ಸಿದ್ದಿ, ಅಕ್ಷತ ಕುಕ್ಕಿ, ಅಪೂರ್ವ ಸೇರಿದಂತೆ ಪ್ರತಿಭಾನ್ವಿತ ಕಲಾವಿದರ ಬಳಗ ಚಿತ್ರದಲ್ಲಿದೆ. ಚಿತ್ರದ ಪ್ರಚಾರ ಕಾರ್ಯದಲ್ಲಿ ಸಿನಿಮಾ ತಂಡ ಬ್ಯುಸಿಯಾಗಿದೆ. ಅಕ್ಟೋಬರ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಕಾಮಿಡಿ ಎಮೋಷನಲ್ ಸಿನಿಮಾ ಇದಾಗಿದ್ದು, ಕುಟುಂಬ ಸಮೇತ ನೋಡಿ ಎಂಜಾಯ್ ಮಾಡಬಹುದಾದ ಸಬ್ಜೆಕ್ಟ್ ಚಿತ್ರದಲ್ಲಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!