ಕನ್ನಡದ ಎರಡು ಚಿತ್ರಕ್ಕೆ ಪ್ರಾದೇಶಿಕ ಚಿತ್ರ ವಿಭಾಗಗಳಲ್ಲಿ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದೆ.
ಕೊಡಗು ಜಿಲ್ಲೆ ಮಡಿಕೇರಿಯ ಯಶೋದ ಪ್ರಕಾಶ್ ಕೊಟ್ಟುಕತ್ತೀರ ಅವರು ನಿರ್ಮಿಸಿ, ನಿರ್ದೇಶಿಸಿರುವ ‘ಕಂದೀಲು’ ಚಿತ್ರ ಫೀಚರ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿಗೆ ಆಯ್ಕೆಯಾಗಿದೆ. ಕಂದೀಲು’ ಗ್ರಾಮವೊಂದರ ಕಥೆಯಾಗಿದ್ದು, ರೈತ ಹಾಗೂ ಆತನ ಕುಟುಂಬದ ಸುತ್ತ ಸುತ್ತುತ್ತದೆ. ಈ ಸಿನಿಮಾ ಹಲವರ ಜೀವನಾಧಾರಿತ ಕಥೆಯಿಂದ ಪ್ರೇರಣೆ ಪಡೆದಿದೆ. ‘ಕಂದೀಲು’ ಸಿನಿಮಾವನ್ನು ಕೆ ಯಶೋಧಾ ಪ್ರಕಾಶ್ ನಿರ್ದೇಶನ ಮಾಡಿದ್ದಾರೆ. ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.
ಮೈಸೂರಿನ ಚಿದಾನಂದ ನಾಯಕ್ ಅವರ ನಿರ್ದೇಶನದ ಕಿರುಚಿತ್ರ ‘ಸನ್ಫ್ಲವರ್ಸ್ ವರ್ ದಿ ಫಸ್ಟ್ ಒನ್ಸ್ ಟು ನೋ’ ಬೆಸ್ಟ್ ಸ್ಕ್ರಿಪ್ಟ್ (ನಾನ್ ಫೀಚರ್ ಫಿಲ್ಮ್) ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದೆ. ‘ಸನ್ಫ್ಲವರ್ಸ್ ವರ್ ದಿ ಫಸ್ಟ್ ಒನ್ಸ್ ಟು ನೋ’ ಪ್ರತಿಷ್ಠಿತ ಕೇನ್ಸ್ ಫಿಲ್ಮ್ ಫೆಸ್ಟಿವಲ್ನಲ್ಲಿ ‘ಲಾ ಸಿನೆಫ್ ಪ್ರಶಸ್ತಿ’ ಮುಡಿಗೇರಿಸಿಕೊಂಡಿತ್ತು.
ಪ್ರಾದೇಶಿಕ ಚಿತ್ರ ವಿಭಾಗಗಳಲ್ಲಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳ 13 ಸಿನಿಮಾಗಳಿಗೆ 71ನೇ ರಾಷ್ಟ್ರೀಯ ಚಲನಚಿತ್ರ ರಾಷ್ಟ್ರಪ್ರಶಸ್ತಿ ಘೋಷಿಸಲಾಗಿದೆ.
—-





Be the first to comment