ನಯನತಾರಾಗೆ 12 ಕೋಟಿ ಸಂಭಾವನೆ

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಟಾಕ್ಸಿಕ್’  ಚಿತ್ರಕ್ಕೆ ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ  12 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ ಆರಂಭದಲ್ಲಿ ನಯನತಾರಾ ಈ ಚಿತ್ರಕ್ಕೆ ಸಹಿ ಹಾಕಲು 15 ಕೋಟಿ ರೂಪಾಯಿ ಸಂಭಾವನೆ ಬೇಡಿಕೆ ಇಟ್ಟಿದ್ದರು. ಬಳಿಕ ನಿರ್ಮಾಪಕರೊಂದಿಗೆ ನಡೆದ ಮಾತುಕತೆಗಳ ನಂತರ 12 ಕೋಟಿ ರೂಪಾಯಿಗೆ ಒಪ್ಪಂದ ಅಂತಿಮಗೊಂಡಿದೆ ಎನ್ನಲಾಗಿದೆ.

‘ಟಾಕ್ಸಿಕ್’ ಚಿತ್ರದಲ್ಲಿ ನಯನತಾರಾ ಅವರ ಪಾತ್ರ ಪ್ರಮುಖವಾಗಿದ್ದರೂ ಸ್ಕ್ರೀನ್ ಟೈಮ್ ಅಷ್ಟಾಗಿ ದೀರ್ಘವಾಗಿಲ್ಲ ಎಂದು ಹೇಳಲಾಗುತ್ತಿದೆ.  ಅವರ ಸ್ಟಾರ್ ವ್ಯಾಲ್ಯೂ ಹಾಗೂ ಪಾತ್ರದ ಮಹತ್ವವನ್ನು ಗಮನದಲ್ಲಿಟ್ಟು ಚಿತ್ರತಂಡ ಭಾರೀ ಮೊತ್ತವನ್ನು ನೀಡಿದೆ.

ಕಿಯಾರಾ ಅಡ್ವಾಣಿಗೂ ಈ ಚಿತ್ರಕ್ಕಾಗಿ 15 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ. ಇತ್ತೀಚೆಗೆ ಬಿಡುಗಡೆಯಾದ ‘ತಬಾಹಿ’ ವಿಡಿಯೋ ಸಾಂಗ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಯಶ್ ಮತ್ತು ಕಿಯಾರಾ ಅಡ್ವಾಣಿ ಜೋಡಿಯ ಕೆಮಿಸ್ಟ್ರಿ ಗಮನ ಸೆಳೆದಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಅದ್ದೂರಿಯಾಗಿ ನಿರ್ಮಿಸುತ್ತಿದೆ.

—–

 

Be the first to comment

Leave a Reply

Your email address will not be published. Required fields are marked *

Translate »
error: Content is protected !!