ಪಂಚರಂಗಿ (2010) ಚಿತ್ರದ ಮೂಲಕ ಜನಪ್ರಿಯ ಆನ್ ಸ್ಕ್ರೀನ್ ಜೋಡಿಯಾಗಿದ್ದ ದಿಗಂತ್ ಮತ್ತು ನಿಧಿ ಸುಬಯ್ಯ ದಶಕದ ನಂತರ ಮತ್ತೆ ಬೆಳ್ಳಿತೆರೆಯಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ.
ಸಮರ್ಥ್ ಬಿ ಕಡಕೋಳ್ ನಿರ್ದೇಶನದ ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದಲ್ಲಿ ಇಬ್ಬರು ತೆರೆ ಹಂಚಿಕೊಳ್ಳಲಿದ್ದಾರೆ.
ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಚಿತ್ರದಲ್ಲಿ ದಿಗಂತ್ ನಾಯಕನಾಗಿ ಮತ್ತು ಧನು ಹರ್ಷ ನಾಯಕಿಯಾಗಿ ನಟಿಸಲಿದ್ದಾರೆ. ನಿಧಿ ಸುಬ್ಬಯ್ಯ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಿಧಿ ಈಗಾಗಲೇ ಚಿತ್ರತಂಡವನ್ನು ಸೇರಿಕೊಂಡಿದ್ದು, ತಮ್ಮ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ.
ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರವನ್ನು ಗುರುದತ್ತ ಗಾಣಿಗ ಮತ್ತು ನಿರ್ದೇಶಕ ಸಮರ್ಥ್ ಕಡಕೋಳ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಛಾಯಾಗ್ರಹಣವಿದೆ.
ಅಣ್ಣಾ ಬಾಂಡ್, ಕೃಷ್ಣನ ಮ್ಯಾರೇಜ್ ಸ್ಟೋರಿಯಲ್ಲಿ ನಟಿಸಿದ್ದ ನಿಧಿ, ಅಜಬ್ ಗಜಾಬ್ ಲವ್ ಮೂಲಕ ಬಾಲಿವುಡ್‌ನಲ್ಲೂ ಕಾಣಿಸಿಕೊಂಡಿದ್ದರು. ಇದಲ್ಲದೆ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8ರಲ್ಲಿ ಕಾಣಿಸಿಕೊಂಡಿದ್ದರು.
ಪಿ. ವಾಸು ನಿರ್ದೇಶನದ ಶಿವರಾಜಕುಮಾರ್ ಅವರ ಆಯುಷ್ಮಾನ್ ಭವ ಸಿನಿಮಾದಲ್ಲಿ ನಿಧಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.
___

Be the first to comment