ಯುವನಟ ಪ್ರವೀರ್ ಶೆಟ್ಟಿ ನಾಯಕನಾಗಿ ನಟಿಸಿರುವ ನಿದ್ರಾದೇವಿ Next Door ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ.
ರಾಜರಾಜೇಶ್ವರಿ ನಗರದಲ್ಲಿ ಸುರಮ್ ಮೂವೀಸ್ ನಿರ್ಮಾಣದ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆಯಲಾಯಿತು. ಈ ವೇಳೆ ಚಿತ್ರದ ಎಲ್ಲಾ ಕಲಾವಿದರು, ತಂತ್ರಜ್ಞಾನರು ಹಾಗೂ ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಭಾಗಿಯಾಗಿದ್ದರು.
ಚಿತ್ರದಲ್ಲಿ ಪ್ರವೀರ್ ಶೆಟ್ಟಿ ನಾಯಕ, ರಿಷಿಕಾ ನಾಯಕ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಶೈನ್ ಶೆಟ್ಟಿ ಹಾಗೂ ಶ್ರುತಿ ಹರಿಹರನ್, ಸುಧಾರಾಣಿ, ಶ್ರೀವತ್ಸ, ಐಶ್ವರ್ಯ ಗೌಡ, ಅನೂಪ್, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ.
ನಿರ್ಮಾಪಕ ಜಯರಾಮ್ ದೇವಸಮುದ್ರ ಅವರು ತಮ್ಮ ಸುರಮ್ ಮೂವೀಸ್ ಬ್ಯಾನರ್ನಡಿ ಚಿತ್ರ ನಿರ್ಮಿಸಿದ್ದಾರೆ. ಈ ಹಿಂದೆ ಇದೇ ಸಂಸ್ಥೆಯಲ್ಲಿ ‘ರೇವ್ ಪಾರ್ಟಿ’ ಮತ್ತು ‘ಎಂಗೇಜ್ಮೆಂಟ್ ‘ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ನಕುಲ್ ಅಭ್ಯಂಕರ್ ಅವರ ಸಂಗೀತ, ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ, ಹೇಮಂತ್ ಕುಮಾರ್ ಡಿ ಸಂಕಲನವಿದೆ.
Be the first to comment