hunter: ಹಂಟರ್‌ ಆದ ಉಪೇಂದ್ರ ಅಣ್ಣನ‌ ಮಗ ನಿರಂಜನ್

ಉಪೇಂದ್ರ ಅವರ ಅಣ್ಣನ‌ ಮಗ ನಿರಂಜನ್ ಸುಧೀಂದ್ರ ಹಂಟರ್‌ ಚಿತ್ರದ ಮೂಲಕ ನಾಯಕ ಆಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ತ್ರಿವಿಕ್ರಮ್ ಸಿನಿಮಾಸ್ ಲಾಂಛನದಲ್ಲಿ ‘ಹಂಟರ್’ ಸಿನಿಮಾ ನಿರ್ಮಾಣವಾಗುತ್ತಿದೆ. ನಿರಂಜನ್ ಸುಧೀಂದ್ರ ಈ ಚಿತ್ರದ ನಾಯಕ. ಸೌಮ್ಯ ಮೆನನ್ ನಾಯಕಿ. ಕಬೀರ್ ಬೇಡಿ, ಸುಮನ್, ಶರತ್ ಕುಮಾರ್, ಸಾಧುಕೋಕಿಲ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಎಪ್ಪತ್ತರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ನವೆಂಬರ್ ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ ಎಂದು ನಿರ್ಮಾಪಕ ತ್ರಿವಿಕ್ರಮ್ ಸಾಫಲ್ಯ ಹೇಳಿದ್ದಾರೆ.

ಸೀಜರ್ ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಹಂಟರ್. ಇದೊಂದು ಕಂಪ್ಲೀಟ್ ಆಕ್ಷನ್ ಥ್ರಿಲ್ಲರ್. ಈ ಚಿತ್ರಕ್ಕಾಗಿ ಎಪ್ಪತ್ತೈದು ಕೆಜಿ ತೂಕವಿದ್ದ ನಿರಂಜನ್, ಮತ್ತಷ್ಟು ತೂಕ ಹೆಚ್ಚಿಸಿಕೊಂಡಿದ್ದಾರೆ. ಗಣೇಶ್ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. ಕಬೀರ್ ಬೇಡಿ, ಸುಮನ್, ಶರತ್ ಕುಮಾರ್ ಅವರಂತಹ ಕಲಾವಿದರೊಂದಿಗೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ. ಚಂದನ್ ಶೆಟ್ಟಿ ಹಂಟರ್ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಜೂನ್ ವೇಳೆಗೆ ಚಿತ್ರೀಕರಣ ಮುಕ್ತಾಯವಾಗಲಿದೆ ಎಂದು ನಿರ್ದೇಶಕ ವಿನಯ್ ಕೃಷ್ಣ ತಿಳಿಸಿದ್ದಾರೆ.

ಹಂಟರ್ ಸಿನಿಮಾ ಫೈಟ್ ನೊಂದಿಗೆ ಶುರುವಾಗಿ ಫೈಟ್ ನಲ್ಲೇ ಮುಕ್ತಾಯವಾಗುತ್ತದೆ. ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರುವುದರಿಂದ ನಾನು ಸಾಕಷ್ಟು ಅಭ್ಯಾಸ ಮಾಡಿದ್ದೇನೆ. ನನ್ನ ಸಿನಿಮಾ ವೃತ್ತಿ ಜೀವನದಲ್ಲೇ ಅದ್ದೂರಿ ಸಿನಿಮಾ ಇದು ಎಂದರೆ ತಪ್ಪಾಗಲಾರದು. ಉತ್ತರ ಹಾಗೂ ದಕ್ಷಿಣ ಭಾರತದ ದಿಗ್ಗಜ ನಟರೊಂದಿಗೆ ನಟಿಸುವ ಅವಕಾಶ ನನಗೆ ಈ ಚಿತ್ರದಲ್ಲಿ ಸಿಕ್ಕಿದೆ. ಎರಡು ಶೇಡ್ ಗಳಲ್ಲಿ ನನ್ನ ಪಾತ್ರವಿರುತ್ತದೆ ಎಂದು ನಾಯಕ ನಿರಂಜನ್ ಸುಧೀಂದ್ರ ಪಾತ್ರದ ಕುರಿತು ವಿವರ ನೀಡಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!