ಭಗವಾನ್ ಶ್ರೀನಿತ್ಯಾನಂದ ಪೋಸ್ಟರ್ ರಿಲೀಸ್

The endless one ಭಗವಾನ್ ಶ್ರೀನಿತ್ಯಾನಂದ ಹೆಸರಿನ ಹೊಸ ಸಿನಿಮಾದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿಲೀಸ್ ಆಗಿದೆ.

ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಪೋಸ್ಟರ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.


ವಿನಯ್ ಗುರೂಜೀ ಮಾತನಾಡಿ, ಭಗವಾನ್ ಹೆಸರಿನಲ್ಲಿ ಕಿರುಚಿತ್ರಗಳಷ್ಟೇ ಬಂದಿದೆ. ಈಗ ಅವರ ವಿಚಾರಗಳನ್ನು ಒಳಗೊಂಡ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ಬರ್ತಿದೆ. ಭಗವಾನ್ ನಲ್ಲಿ ಒಂದೇ ತತ್ವ. ಮನುಷ್ಯತ್ವ. ಅಲ್ಲಿ ಮತಕ್ಕೆ ಜಾಗವಿಲ್ಲ. ಮನುಷ್ಯತ್ವಕ್ಕಿಂತ ದೊಡ್ಡ ತತ್ತ್ವ ಮತ್ತೊಂದಿಲ್ಲ. ಶಿರಡಿಬಾಬಾ ಸೀರಿಯಲ್ ಬಂದಮೇಲೆ ಬಾಬಾ ಬಗ್ಗೆ ಗೊತ್ತಾಗಿದ್ದು. ಶ್ರೀನಿವಾಸ ಕಲ್ಯಾಣ ಸಿನಿಮಾ ಬಂದ ಮೇಲೆ ತಿರುಪತಿ ಬಗ್ಗೆ ಗೊತ್ತಾಯ್ತು. ಅದೇ ರೀತಿ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದಲ್ಲಿ ಹಲವು ವಿಷಯಗಳನ್ನು ಜನರಿಗೆ ತಲುಪಿಸುವ ಕೆಲಸವಾಗಿದೆ ಎಂದು ಹೇಳಿದರು.

ನಿರ್ಮಾಪಕ ಕೃಷ್ಣ ಕೆ.ಆರ್ ಮಾತನಾಡಿ, ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದ ಟೈಟಲ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ನಮ್ಮ.ಕುಟುಂಬದವರು ಭಗವಾನ್ ನಿತ್ಯಾನಂದ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದೇವೆ. ಈ ಸಿನಿಮಾ ಮೂಲಕ ಚಿಕ್ಕದೊಂದು ಅಳಿಲು ಸೇವೆ ಮಾಡುತ್ತಿದ್ದೇವೆ ಎಂದರು.

ಗುಲಾಬ್ ಪ್ರೊಡಕ್ಷನ್ ನಲ್ಲಿ ತಯಾರಾಗಿರುವ ಚೊಚ್ಚಲ ಸಿನಿಮಾ ಇದಾಗಿದೆ. ಕನ್ನಡ‌ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ, ಮಲಯಾಳಂ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಸದ್ಯವೇ ಸ್ಟಾರ್ ಕಾಸ್ಟ್, ತಂತ್ರಜ್ಞಾನರ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!