ರನ್ಯಾ ರಾವ್‌ಗಿಲ್ಲ ಬಿಡುಗಡೆ ಭಾಗ್ಯ

ಗೋಲ್ಡ್​ ಸ್ಮಗ್ಲಿಂಗ್  ಆರೋಪದಲ್ಲಿ ಜೈಲು ಸೇರಿದ್ದ ನಟಿ ರನ್ಯಾ ರಾವ್‌  ಜಾಮೀನು ಅರ್ಜಿ ವಜಾ ಆಗಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಿದೆ.  ನ್ಯಾಯಮೂರ್ತಿ ವಿಶ್ವಜಿತ್ ಪೀಠ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದರು. ಆರೋಪಿ ರನ್ಯಾರಾವ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಾಡಿದ್ದರು. ಇನ್ನು ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರವಾಗಿರಲಿದೆ.

ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ರನ್ಯಾ ರಾವ್ ಪರಪ್ಪನ ಅಗ್ರಹಾರಕ್ಕೆ ಹೋಗಿ 50 ದಿನಗಳು ಆಗಿದೆ. ಮಾ. 3ರಂದು ಡಿಆರ್‌ಐ ಅಧಿಕಾರಿಗಳು ರನ್ಯಾ ರಾವ್‌  ಬಂಧನ ಮಾಡಿ ಜೈಲಿಗೆ ಕಳಿಸಿದ್ದರು. ಇಲ್ಲಿಯವರೆಗೆ 2 ಬಾರಿ ರನ್ಯಾರಾವ್ ಜಾಮೀನು ಅರ್ಜಿ ವಜಾ ಆಗಿದೆ.

ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ, ಗೋಲ್ಡನ್ ಸ್ಟಾರ್‌ ಗಣೇಶ್ ಜೊತೆ ಪಟಾಕಿ ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರನ್ಯಾ ರಾವ್‌ ಅವರನ್ನು  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೋಲ್ಡ್​ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!