ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಕನ್ನಡಿಗರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿ ಎಫ್‌ಐಆರ್ ರದ್ದು ಕೋರಿ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.
ಹೈಕೋರ್ಟ್ ಅನುಮತಿ ಪಡೆಯದೆ ದೋಷಾರೋಪ ಪಟ್ಟಿ ಸಲ್ಲಿಸಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿತು.
ಪೋಸ್ಟ್ ಮೂಲಕ ಹೇಳಿಕೆಯನ್ನ ಕಳಿಸಲು ಅವಕಾಶ ನೀಡಬೇಕು ಎಂದು ಸೋನು ನಿಗಮ್ ಪರ ವಕೀಲ ಮನವಿ ಮಾಡಿದರು. ನ್ಯಾಯಾಧೀಶರು ಸೋನು ನಿಗಮ್ ವೆಚ್ಚದಲ್ಲಿ ಅವರಿದ್ದ ಸ್ಥಳದಲ್ಲಿ ತನಿಖೆ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ತನಿಖೆ ನಡೆಸಲು ಸೂಚನೆ ನೀಡಿದರು.
ಏಪ್ರಿಲ್ 25, 26ರಂದು ಸೋನು ನಿಗಮ್ ಅವರು ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ನಡೆದಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರ ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಮೇ 2ರಂದು ದೂರು ನೀಡಲಾಗಿತ್ತು. ಪೊಲೀಸರು ಮೇ 3ರಂದು ಎಫ್‌ಐಆರ್ ದಾಖಲಿಸಿದ್ದರು.
—–

Be the first to comment