ಈ ವಾರ ಯಾವುದೇ ಹೊಸ ಕನ್ನಡ ಸಿನಿಮಾಗಳು ತೆರೆಗೆ ಬರುತ್ತಿಲ್ಲ. ಯಾವುದೇ ಹೊಸ ಸಿನಿಮಾಗಳನ್ನು ರಿಲೀಸ್ ಮಾಡಲು ಚಿತ್ರತಂಡ ಆಸಕ್ತಿ ತೋರಿಸಿಲ್ಲ!
ಶುಕ್ರವಾರ ಬಂತೆಂದರೆ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತವೆ. ಆದರೆ ಈ ವಾರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿರುವ ಕಾರಣದಿಂದ ಕನ್ನಡದ ಸಿನಿಮಾ ರಿಲೀಸ್ ಆಗುತ್ತಿಲ್ಲ.
‘ಪವರ್ ಸ್ಟಾರ್’ ಪುನೀತ್ ರಾಜ್ ಕುಮಾರ್ ಅವರ ಚೊಚ್ಚಲ ಸಿನಿಮಾ ‘ಅಪ್ಪು’ ಇಂದು ರಾಜ್ಯಾದ್ಯಂತ ಅನೇಕ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಮರು ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಟಾಲಿವುಡ್ನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರು ‘ಅಪ್ಪು’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಪಾರ್ವತಮ್ಮ ರಾಜ್ಕುಮಾರ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಈಗ ‘ಅಪ್ಪು’ ಸಿನಿಮಾ ಮತ್ತೆ ರಿಲೀಸ್ ಆಗುತ್ತಿರುವುದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಪಿಆರ್ಕೆ ಪ್ರೊಡಕ್ಷನ್ಸ್ ಬ್ಯಾನರ್ ಮೂಲಕ ಸಿನಿಮಾ ಬಿಡುಗಡೆ ಕಾಣುತ್ತಿದೆ.
ಹಿಂದಿಯಲ್ಲಿ ಜಾನ್ ಅಬ್ರಹಾಂ ನಟಿಸುತ್ತಿರುವ ‘ದಿ ಡಿಪ್ಲೋಮ್ಯಾಟ್’ ಸಿನಿಮಾ ತೆರೆಗೆ ಬರುತ್ತಿದೆ. ಶಿವ ನಾಯರ್ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಉಳಿದಂತೆ ತೆಲುಗಿನಲ್ಲಿ ಕಿರಣ್ ಹಾಗೂ ರುಕ್ಸರ್ ದಿಲ್ಲೋನ್ ನಟನೆಯ ‘ದಿಲ್ರುಬಾ’, ತೆಲುಗಿನ ‘ಕೋರ್ಟ್’, ‘ತಮಿಳಿನ ‘ಸ್ವೀಟ್ಹಾರ್ಟ್’ ಸಿನಿಮಾ ತೆರೆಗೆ ಬರುತ್ತಿದೆ.

Be the first to comment