kd: ಶೂಟಿಂಗ್‌ ವೇಳೆ ಗಾಯಗಳಾಗಿಲ್ಲ ಎಂದ ಸಂಜಯ್‌ ದತ್‌

ಕೆಡಿ ಚಿತ್ರದ ಚಿತ್ರೀಕರಣದ ವೇಳೆ ನನಗೆ ಯಾವುದೇ ಗಾಯಗಳಾಗಿಲ್ಲ ಎಂದು ಬಾಲಿವುಡ್ ನಟ ಸಂಜಯ್ ದತ್ ಅವರು ಸ್ಪಷ್ಟನೆ ನೀಡಿದ್ದಾರೆ.

. “ನಾನು ಗಾಯಗೊಂಡಿರುವ ವರದಿಗಳಿವೆ. ಆದರೆ ಈ ವರದಿಗಳು ಸಂಪೂರ್ಣ ಆಧಾರ ರಹಿತ. ನಾನು ದೇವರ ದಯೆಯಿಂದ ಆರೋಗ್ಯವಾಗಿದ್ದೇನೆ. ನಾನು ಕೆಡಿ ಚಿತ್ರದ ಚಿತ್ರೀಕರಣದ ವೇಳೆ ಗಾಯಗೊಂಡಿಲ್ಲ. ನನ್ನ ದೃಶ್ಯಗಳನ್ನು ಚಿತ್ರೀಕರಿಸುವಾಗ ಚಿತ್ರ ತಂಡ ಹೆಚ್ಚಿನ ಎಚ್ಚರಿಕೆ ವಹಿಸಿದೆ. ನಿಮ್ಮ ಕಾಳಜಿಗಾಗಿ ಎಲ್ಲರಿಗೂ ಧನ್ಯವಾದಗಳು” ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದಾರೆ.

ಸಂಜಯ್ ದತ್ ಅವರು ಚಿತ್ರದ ಬಾಂಬ್ ಬ್ಲಾಸ್ಟ್ ಸೀಕ್ವೆನ್ಸ್‌ ಗಾಗಿ ಶೂಟಿಂಗ್ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ವರದಿ ಆಗಿತ್ತು.

ಚಿತ್ರೀಕರಣ ಮುಗಿಸಿ ಮಂಗಳವಾರ ಸಂಜೆ ಸಂಜಯ್‌ ದತ್‌ ಅವರು ಮುಂಬೈಗೆ ತೆರಳಿದ್ದಾರೆ. ಮೇ ತಿಂಗಳಿನಲ್ಲಿ ಮತ್ತೆ ಶೂಟಿಂಗ್ ಆರಂಭಿಸಲು ನಗರಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ.

ಧ್ರುವ ಸರ್ಜಾ ನಟಿಸಿರುವ ಕೆಡಿ ಚಿತ್ರವನ್ನು ಪ್ರೇಮ್ ನಿರ್ದೇಶಿಸಿದ್ದಾರೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಕೂಡಾ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
——

Be the first to comment

Leave a Reply

Your email address will not be published. Required fields are marked *

Translate »
error: Content is protected !!