ಉತ್ತರ ಕರ್ನಾಟಕದ ಹಳ್ಳಿ ಕಥೆ ‘ಥಗ್ಸ್ ಆಫ್ ರಾಮಘಡ’

ಉತ್ತರ ಕರ್ನಾಟಕದ ಹಳ್ಳಿ ಕಥೆ ಹೊಂದಿದ ‘ಥಗ್ಸ್ ಆಫ್ ರಾಮಘಡ’ ಮುಂದಿನ ವರ್ಷ ಬಿಡುಗಡೆ ಆಗಲಿದೆ.

ಕಾರ್ತಿಕ್ ನಿರ್ದೇಶಿಸಿರುವ ಮೊದಲ ಸಿನಿಮಾ ಇದಾಗಿದೆ. ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಈಗಾಗಲೇ ಬಿಡುಗಡೆಯಾಗಿದೆ.

ಐಟಿ ಕ್ಷೇತ್ರ ಹಾಗೂ ಪ್ರಾಧ್ಯಾಪಕನಾಗಿ ಕೆಲಸ ಮಾಡಿದ ಅನುಭವವಿದೆ. ಸಿನಿಮಾ ಮೇಲಿನ ಅಪಾರ ಆಸಕ್ತಿಯಿಂದ ಚಿತ್ರರಂಗದ ಕಡೆ ಮುಖ ಮಾಡಿದೆ. ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ಈ ಚಿತ್ರದ ಕಥೆ ಉತ್ತರ ಕರ್ನಾಟಕ ಭಾಗದಲ್ಲಿ 1995ರಲ್ಲಿ ನಡೆದ ಸತ್ಯ ಘಟನೆ ಆಧರಿಸಿದ್ದು ಅದಕ್ಕೆ ಒಂದಿಷ್ಟು ಸಿನಿಮ್ಯಾಟಿಕ್ ಟಚ್ ಕೊಟ್ಟು ಕ್ರೈಂ ಕಲ್ಟ್ ಕಥಾಹಂದರದ ಸಿನಿಮಾ ಮಾಡಿದ್ದೇವೆ ಎಂದು ನಿರ್ದೇಶಕ ಕಾರ್ತಿಕ್ ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದ ಒಂದು ಚಿಕ್ಕ ಹಳ್ಳಿಯಲ್ಲಿ ನಡೆಯುವ ಕಥೆ ಇದು. ಅದಕ್ಕೆಂದೇ ಪೂರ್ತಿ ಸಿನಿಮಾವನ್ನು ಉತ್ತರ ಕರ್ನಾಟಕ ಭಾಗದಲ್ಲೇ ಚಿತ್ರೀಕರಣ ನಡೆಸಲಾಗಿದೆ. ಆದಷ್ಟು ರಿಯಲಿಸ್ಟಿಕ್ ಆಗಿಯೇ ತೆರೆ ಮೇಲೆ ತರುವ ಪ್ರಯತ್ನ ಮಾಡಿದ್ದೇವೆ. ಮುಂದಿನ ವರ್ಷ ಸಿನಿಮಾ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ ಎಂದು ಕಾರ್ತಿಕ್ ತಿಳಿಸಿದರು.

ಭಾರತ್ ಟಾಕೀಸ್ ನಡಿ ಜೈ ಕುಮಾರ್, ಕೀರ್ತಿ ರಾಜ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರಾಜೇಶ್ ಕೃಷ್ಣನ್, ಶಶಾಂಕ್ ಶೇಷಗಿರಿ, ಅನುರಾಧ ಭಟ್ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ.

ಮನು ದಾಸಪ್ಪ ಛಾಯಾಗ್ರಹಣ, ಶ್ರೀಧರ್ ಸಂಕಲನ, ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!