ಬಿಗ್ ಬಾಸ್

ಬಿಗ್ ಬಾಸ್ ಮನೆ ಬಂದ್ ಗೆ ನೋಟೀಸ್

ಕನ್ನಡದ ಬಿಗ್ ಬಾಸ್ ಮನೆಯನ್ನು ಬಂದ್ ಮಾಡುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ.

ಬಿಗ್ ಬಾಸ್ ಮನೆಯಲ್ಲಿ ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸದ ಹಿನ್ನೆಲೆಯಲ್ಲಿ ಈ ನೋಟಿಸ್ ನೀಡಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಲೀಟರ್ ನೀರು ಬಳಕೆ ಮಾಡುತ್ತಿದ್ದು, ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ.

ಬಿಗ್ ಬಾಸ್ ಕನ್ನಡದ 12ನೇ ಆವೃತ್ತಿ ಶುರುವಾಗಿ ಒಂದೇ ವಾರಕ್ಕೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಆಯೋಜನೆ ಮಾಡುತ್ತಿರುವ ಕಲರ್ಸ್ ಕನ್ನಡ ವಾಹಿನಿ ಈಗ ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.

ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದಾರೆ. ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ನಲ್ಲಿ ಈಗ ಸ್ಪರ್ಧಿಗಳ ನಡುವೆ ಪೈಪೋಟಿ ಆರಂಭ ಆಗಿದೆ. ಈ ಬಾರಿ ಒಂಟಿ, ಜಂಟಿ ಈ ರೀತಿ ಭಿನ್ನ ಆಗಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!