‘ಕೆಡಿ’ ಚಿತ್ರದ ‘ಸರ್ಸೆ ಸೆರಗ ಸರ್ಸೆ’ ಹಾಡಿನ ಸಾಹಿತ್ಯ ಮತ್ತು ದೃಶ್ಯಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ರಾಷ್ಟ್ರೀಯ ಮಹಿಳಾ ಆಯೋಗ ನಿರ್ದೇಶಕ ಪ್ರೇಮ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ.
ಹಾಡಿನ ಹಿಂದಿ ಆವೃತ್ತಿ ‘ಸರ್ಕೆ ಚುನರಿಯಾ ತೇರಿ ಸರ್ಕೆ’ ಭಾರೀ ಟೀಕೆಗೆ ಗುರಿಯಾಗಿದೆ. ಹಾಡಿನ ಬಗ್ಗೆ ಸಿಬಿಎಫ್ಸಿ ಮತ್ತು ಸೈಬರ್ ಪೊಲೀಸರಿಗೆ ದೂರು ದಾಖಲಾಗಿದೆ. ಈಗ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ನಟಿ ನೋರಾ ಫತೇಹಿ, ನಟ ಸಂಜಯ್ ದತ್, ಗೀತರಚನೆಕಾರ ರಕೀಬ್ ಆಲಂ, ನಿರ್ಮಾಪಕ ವೆಂಕಟ್ ಕೆ ನಾರಾಯಣ ಮತ್ತು ನಿರ್ದೇಶಕ ಪ್ರೇಮ್ ಅವರಿಗೆ ನೋಟಿಸ್ ನೀಡಿದೆ.
ಹಾಡಿನ ಸಾಹಿತ್ಯ ಮತ್ತು ದೃಶ್ಯಗಳು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎನ್ಸಿಡಬ್ಲ್ಯು ಕಾಯ್ದೆ 1990ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ ಹಾಗೂ ಪೋಕ್ಸೋ ಕಾಯ್ದೆಯ ಉಲ್ಲಂಘನೆ ಸಂಬಂಧ ವಿಚಾರಣೆ ನಡೆಸಲು ನೋಟಿಸ್ ನೀಡಲಾಗಿದೆ.
ಮಾರ್ಚ್ 24 ರಂದು ಆಯೋಗದ ಮುಂದೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ. ಗೈರಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ನಿರ್ದೇಶಕ ಪ್ರೇಮ್ ಹಾಡಿನ ಬಗ್ಗೆ ಕ್ಷಮೆ ಕೇಳಿ ಹಾಡನ್ನು ಮರುಬರೆಯುವ ಭರವಸೆ ನೀಡಿದ್ದಾರೆ.
—-





Be the first to comment