ಮೀಟೂ ಪ್ರಕರಣ ಸಂಬಂಧ ನಟ ಅರ್ಜುನ್ ಸರ್ಜಾ ವಿರುದ್ಧ ದೂರು ನೀಡಿದ್ದ ನಟಿ ಶ್ರುತಿ ಹರಿಹರನ್ ಅವರಿಗೆ ವಿಚಾರಣೆಗೆ ಹಾಜರಾಗಲು ಬೆಂಗಳೂರು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಶ್ರುತಿ ಹರಿಹನ್ ಗೆ ನೋಟಿಸ್ ನೀಡಿರುವ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಮುಂದಿನ ಮೂರು ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
2018ರಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿ ಸದ್ದು ಮಾಡಿದ್ದರು. ವಿಸ್ಮಯ ಚಿತ್ರದ ಚಿತ್ರೀಕರಣದ ವೇಳೆ ಸಲುಗೆ ಬೆಳೆಸಿಕೊಂಡಿದ್ದ ಅರ್ಜುನ್ ಸರ್ಜಾ ಅನಗತ್ಯವಾಗಿ ನನ್ನನ್ನು ಕಾಫಿ-ತಿಂಡಿಗೆ ಕರೆಯುತ್ತಿದ್ದರು ಎಂದು ಆರೋಪಿಸಿದ್ದರು. ಆರೋಪವನ್ನು ನಿರಾಕರಿಸಿದ್ದ ಅರ್ಜುನ್ ಸರ್ಜಾ, ಶ್ರುತಿ ಹರಿಹರನ್ ವಿರುದ್ಧ 5 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದರು.
2018ರಲ್ಲಿ ಶ್ರುತಿ ಮಾಡಿದ್ದ ಮೀಟೂ ಪ್ರಕರಣ ಕೊರೊನಾ ವೈರಸ್ ಅಬ್ಬರದ ಹಿನ್ನೆಲೆಯಲ್ಲಿ ತಣ್ಣಗಾಗಿತ್ತು. ಇದೀಗ ಪೊಲೀಸರು ನ್ಯಾಯಾಲಯಕ್ಕೆ ಅರ್ಜುನ್ ಸರ್ಜಾ ವಿರುದ್ಧದ ಆರೋಪಕ್ಕೆ ಬಿ ರಿಪೊರ್ಟ್ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಅಂತಿಮ ಹಂತದ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
___

Be the first to comment