ನಟ ರಮೇಶ್ ಅರವಿಂದ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 100 ನವೆಂಬರ್ 19 ರಂದು ತೆರೆಗೆ ಬರಲು ಸಜ್ಜಾಗಿದೆ.
ಚಿತ್ರ ಬಿಡುಗಡೆ ದಿನಾಂಕವನ್ನು ರಮೇಶ್ ಅರವಿಂದ್ ಅವರೇ ಘೋಷಿಸಿದ್ದಾರೆ. ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಇದೊಂದು ಕೌಟುಂಬಿಕ ಕಥೆ ಹೊಂದಿದ ಚಿತ್ರವಾಗಿದ್ದು ಪ್ರೇಕ್ಷಕರ ಮುಂದೆ ಬರಲು ಕಾತರನಾಗಿದ್ದೇನೆ ಎಂದು ರಮೇಶ್ ತಿಳಿಸಿದ್ದಾರೆ.
ಸೈಬರ್ ಕ್ರೈಮ್ ಆಧಾರಿತ ಚಿತ್ರ ಇದಾಗಿದ್ದು, ಗಾಳಿಪಟ-2 ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ ಅವರು ತಮ್ಮ ಬ್ಯಾನರ್ ಸೂರಜ್ ಪ್ರೊಡಕ್ಷನ್ಸ್ ನಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ. ರಮೇಶ್ ಅರವಿಂದ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದು, ರಚಿತಾ ರಾಮ್ ಅವರ ಸಹೋದರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಇವರಿಬ್ಬರೂ ಪುಷ್ಪಕ ವಿಮಾನದಲ್ಲಿ ಜೊತೆಗೆ ನಟಿಸಿದ್ದರು.
ಚಿತ್ರದಲ್ಲಿ ಪೂರ್ಣಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ಸಂಯೋಜನೆ, ಸತ್ಯ ಹೆಗಡೆ ಛಾಯಾಗ್ರಹಣ ಮಾಡಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಚಿತ್ರಕ್ಕೆ ಎಡಿಟರ್ ಆಗಿ ಕೆಲಸ ಮಾಡಿದ್ದಾರೆ.
ರಾಮ ಶಾಮ ಭಾಮಾ ಚಿತ್ರದ ಮೂಲಕ ನಿರ್ದೇಶನ ಆರಂಭಿಸಿದ ರಮೇಶ್ ಅವರು ಸುಂದರಾಂಗ ಜಾಣ (2016) ಚಿತ್ರವನ್ನು ಕೊನೆಯದಾಗಿ ನಿರ್ದೇಶನ ಮಾಡಿದ್ದರು.
Be the first to comment