ನ.12ರಂದು ಬಹುನಿರೀಕ್ಷಿತ ಪ್ರೇಮಂ ಪೂಜ್ಯಂ ತೆರೆಗೆ

ಲವ್ಲಿ ಸ್ಟಾರ್ ಪ್ರೇಮ್ ನಟನೆಯ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ನವೆಂಬರ್ 12ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಈಗಾಗಲೇ ಚಿತ್ರ ಸೆನ್ಸಾರ್ ಮಂಡಳಿಯಿಂದ ‘ಯು/ಎ ಪ್ರಮಾಣ ಪತ್ರ’ ಪಡೆದಿದೆ. ಈ ಚಿತ್ರ ಅಕ್ಟೋಬರ್ 29ರಂದು ತೆರೆಗೆ ಬರಬೇಕಿತ್ತು. ಆದರೆ ಈಗ ಚಿತ್ರದ ರಿಲೀಸ್ ದಿನವನ್ನು ಚಿತ್ರತಂಡ ಸ್ವಲ್ಪ ಮುಂದಕ್ಕೆ ಹಾಕಿದೆ.

ಈಗಾಗಲೇ ‘ಪ್ರೇಮಂ ಪೂಜ್ಯಂ’ ಚಿತ್ರದ ಟ್ರೈಲರ್ ಕೆಲದಿನಗಳ ಹಿಂದೆ ಬಿಡುಗಡೆ ಆಗಿದ್ದು ಸಿನಿರಸಿಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ. ರಾಘವೇಂದ್ರ ಬಿ.ಎಸ್ ಅವರು ಚಿತ್ರ ನಿರ್ದೇಶಿಸುವುದರ ಜೊತೆಗೆ, ಕಥೆ, ಚಿತ್ರಕಥೆಯನ್ನು ಬರೆದಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜನೆಯನ್ನೂ ಅವರು ಮಾಡಿದ್ದಾರೆ.

ಸಂಗೀತಮಯ ಆಗಿರುವ ‘ಪ್ರೇಮಂ ಪೂಜ್ಯಂ’ ಚಿತ್ರಕ್ಕೆ ಹರಿಹರನ್ , ಮೋಹಿತ್ ಚೌಹಾಣ್, ವಿಜಯ್ ಪ್ರಕಾಶ್, ಸೋನು ನಿಗಮ್, ಅರ್ಮಾನ್ ಮಲಿಕ್ ಸೇರಿದಂತೆ ಹಲವು ಗಾಯಕರು ಹಾಡಿದ್ದಾರೆ. ಚಿತ್ರದಲ್ಲಿ ಒಟ್ಟು 12 ಹಾಡುಗಳು ಇದ್ದು, ಈಗಾಗಲೇ ಇವು ಸಾಕಷ್ಟು ಜನಪ್ರಿಯತೆ ಗಳಿಸಿವೆ.

ಸ್ನೇಹ, ಪ್ರೀತಿಯ ಕಥಾ ಹೊಂದಿರುವ ಚಿತ್ರದಲ್ಲಿ ನಾಯಕಿಯಾಗಿ ಬೃಂದಾ ಆಚಾರ್ಯ ನಟಿಸಿದ್ದಾರೆ. ಉಳಿದಂತೆ ಐಂದ್ರಿತಾ ರೇ, ಸುಮನ್, ಮಾಸ್ಟರ್ ಆನಂದ್, ಸಾಧು ಕೋಕಿಲಾ, ಅನು ಪ್ರಭಾಕರ್, ತಪಸ್ವಿನಿ, ಟಿ ಎಸ್ ನಾಗಾಭರಣ ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರಕ್ಕೆ ರಕ್ಷಿತ್ ಕೆಡಂಬಾಡಿ, ಡಾ.ರಾಜ್ ಕುಮಾರ್ ಜಾನಕಿ ರಾಮನ್, ಡಾ. ರಾಘವೇಂದ್ರ ಎಸ್, ಮನೋಜ್ ಕೃಷ್ಣನ್ ಅವರು ಬಂಡವಾಳ ಹಾಕಿದ್ದಾರೆ. ನವೀನ್ ಕುಮಾರ್ ಅವರ ಛಾಯಾಗ್ರಹಣ, ಹರೀಶ್ ಕೊಮ್ಮೆ ಅವರ ಸಂಕಲನ ಈಗಾಗಲೇ ಟ್ರೈಲರ್ ಮೂಲಕ ವೀಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಹಾಡು, ಟ್ರೈಲರ್ ಮೂಲಕ ಪ್ರೇಮಂ ಪೂಜ್ಯಂ ಚಿತ್ರ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ. ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಎದುರು ನೋಡುತ್ತಿದ್ದು ಚಿತ್ರತಂಡ ರಿಲೀಸ್ ಗಾಗಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!