ಡಿಸೆಂಬರ್ ನಲ್ಲಿ ಥಿಯೇಟರ್ ಗೆ ಸಾಲು ಸಾಲು ಚಿತ್ರಗಳು

ವರ್ಷದ ಕೊನೆಯ ತಿಂಗಳಾದ ಡಿಸೆಂಬರ್ ನಲ್ಲಿ ಸಾಕಷ್ಟು ಕನ್ನಡ ಸಿನಿಮಾಗಳು ಬಿಡುಗಡೆಗೆ ರೆಡಿ ಆಗಿವೆ.

ಡಿಸೆಂಬರ್ 3ರಂದು ಶ್ರೀಮುರಳಿ ನಟನೆಯ ‘ಮದಗಜ’ ಸಿನಿಮಾ ಬಿಡುಗಡೆ ಆಗಲಿದೆ. ಮಹೇಶ್ ನಿರ್ದೇಶನ ಮಾಡಿರುವ ಸಿನಿಮಾಕ್ಕೆ ಉಮಾಪತಿ ಶ್ರೀನಿವಾಸ್ ನಿರ್ಮಾಪಕ ಆಗಿದ್ದಾರೆ. ಆಶಿಕಾ ರಂಗನಾಥ್ ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಈಗಾಗಲೇ ಟ್ರೈಲರ್, ಪೋಸ್ಟರ್ ಗಳ ಮೂಲಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಡಿ.10ರಂದು ಶರಣ್ ನಟನೆಯ ‘ಅವತಾರ ಪುರುಷ’ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಶರಣ್ ಅವರು 10 ಅವತಾರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಚಿತ್ರ ಸಾಕಷ್ಟು ಸದ್ದು ಮಾಡಿದೆ.

ಅಂತೆಯೇ ಅಜಯ್ ರಾವ್, ರಚಿತಾ ರಾಮ್ ನಟನೆಯ ‘ಲವ್ ಯೂ ರಚ್ಚು’ ಸಿನಿಮಾ ಡಿ.10ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಹಾಡಿನ ಹಾಟ್ ಸೀನ್ ಗಳು ನೋಡುಗರ ಎದೆಬಡಿತ ಹೆಚ್ಚಿಸಿದೆ.

ರವಿಚಂದ್ರನ್ ನಟನೆಯ ‘ದೃಶ್ಯ 2’ ಡಿಸೆಂಬರ್ 10ರಂದೇ ಬಿಡುಗಡೆ ಆಗಲಿದೆ ಎನ್ನುವ ಮಾಹಿತಿ ಲಭಿಸಿದೆ. ಈ ಚಿತ್ರದ ಟ್ರೈಲರ್ ಈಗಾಗಲೇ ನೋಡುಗರ ಗಮನ ಸೆಳೆದಿದೆ.

ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಸಿನಿಮಾ ಡಿಸೆಂಬರ್ 24ಕ್ಕೆ ಬಿಡುಗಡೆ ಆಗಲಿದೆ. ಅದೇ ದಿನ ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಎರಡೂ ಚಿತ್ರಗಳ ಮೇಲೆ ಸಾಕಷ್ಟು ನಿರೀಕ್ಷೆ ಇದೆ.

ಡಿಸೆಂಬರ್ ನಲ್ಲಿ ಬಿಡುಗಡೆ ಆಗಲಿರುವ ಕನ್ನಡ ಚಿತ್ರಗಳನ್ನು ಪ್ರೇಕ್ಷಕ ಯಾವ ರೀತಿ ಮೆಚ್ಚುತ್ತಾನೆ ಎನ್ನುವುದನ್ನು ಕಾದು ನೋಡಬೇಕಿದೆ.
__

 

Be the first to comment

Leave a Reply

Your email address will not be published. Required fields are marked *

Translate »
error: Content is protected !!