ಓಂ ಶಿವಂ

“ಓಂ ಶಿವಂ” ಶೀಘ್ರ ತೆರೆಗೆ

ಭಾರ್ಗವ್ ಕೃಷ್ಣ ಅಭಿನಯದ ಚೊಚ್ಚಲ ಚಿತ್ರ “ಓಂ ಶಿವಂ” ಶೀಘ್ರದಲ್ಲಿ ಬಿಡುಗಡೆ ಆಗಲಿದೆ.

ಭಾರ್ಗವ್ ಕೃಷ್ಣ ಅವರ ತಂದೆ ಕೃಷ್ಣ ಕೆಎನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶಿವಮೊಗ್ಗದ ಆಲ್ವಿನ್ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಕೃಷ್ಣ ಕೆಎನ್ ಅವರು, ಆಲ್ವಿನ್ ಅವರು ಕಥೆ ಸಿದ್ಧ ಮಾಡಿಕೊಂಡು ನನಗೆ ಹೇಳಿದರು. ನಾನು ನಾಯಕನನ್ನು ಹುಡುಕಿ ಎಂದಾಗ ಅವರು ನಿಮ್ಮ ಮಗನಿಗೆ ಕಥೆ ಸರಿ ಹೊಂದುತ್ತದೆ ಎಂದರು. ಮುಂದಿನ ತಿಂಗಳು ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾಗಲಿದೆ. 25 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಅದ್ಧೂರಿ ಸೆಟ್ ಹಾಕಿ ಹಾಡನ್ನು ಚಿತ್ರೀಕರಣ ಮಾಡಲಾಗಿದೆ. ಮುಂದಿನ ಎರಡು ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಆಲ್ವಿನ್ ಅವರು, ಈ ಚಿತ್ರದಲ್ಲಿ ಪ್ರೇಕ್ಷಕರಿಗೆ ಬೇಕಾದ ಎಲ್ಲಾ ರೀತಿಯ ಮನೋರಂಜನಾ ಅಂಶಗಳಿವೆ. ಭಾರ್ಗವ್ ಕೃಷ್ಣ ಅವರು ಉತ್ತಮವಾಗಿ ನಟಿಸಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳು ಹಾಗೂ ಸಾಹಸ ಸನ್ನಿವೇಶಗಳಿವೆ ಎಂದಿದ್ದಾರೆ.

ಚಿತ್ರದ ನಾಯಕಿಯಾಗಿ ವಿರಾಣಿಕ ಶೆಟ್ಟಿ ಅವರು ನಟಿಸಿದ್ದಾರೆ. ತಾರಾಬಳಗದಲ್ಲಿ ಕಾಕ್ರೋಚ್ ಸುಧಿ, ಯಶ್ ಶೆಟ್ಟಿ, ಅಪೂರ್ವ, ಲಕ್ಷ್ಮಿ ಇತರರು ನಟಿಸಿದ್ದಾರೆ.

ವಿಜಯ್ ಯಾರ್ಡ್ಲೆ ಸಂಗೀತ ನಿರ್ದೇಶನ, ವೀರೇಶ್ ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಇದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!