Ondu sarala premakathe ಸಿಂಪಲ್ ಸುನಿ ಚಿತ್ರಕ್ಕೆ ಸ್ವಾತಿಷ್ಠ ಕೃಷ್ಣನ್ ನಾಯಕಿ

ಸಿಂಪಲ್ ಸುನಿ ಮತ್ತು ವಿನಯ್ ರಾಜಕುಮಾರ್ ಕಾಂಬಿನೇಶನ್‍ನಲ್ಲಿ ಮೂಡಿ ಬರುತ್ತಿರುವ ‘ಒಂದು ಸರಳ ಪ್ರೇಮಕಥೆ’ ಚಿತ್ರಕ್ಕೆ ‘ವಿಕ್ರಮ್’ ಚಿತ್ರದಲ್ಲಿ ನಟಿಸಿರುವ ಸ್ವಾತಿಷ್ಠ ಕೃಷ್ಣನ್ ನಾಯಕಿಯಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದಾರೆ.

ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು ಸರಳ ಪ್ರೇಮಕಥೆ’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಚಿತ್ರಕ್ಕಾಗಿ ನಾಯಕಿ ಹುಡುಕಾಟದಲ್ಲಿದ್ದ ಸಿಂಪಲ್ ಸುನಿ ಧಾರವಾಡ ಮೂಲದ ಕನ್ನಡತಿ ನಟಿ ಸ್ವತಿಷ್ಠ ಕೃಷ್ಣನ್ ಅವರನ್ನು ಕನ್ನಡ ಚಿತ್ರರಂಗಕ್ಕೆ ಕರೆ ತಂದಿದ್ದಾರೆ.

ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಸ್ವತಿಷ್ಠ ಕೃಷ್ಣನ್ ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿದ್ದಾರೆ.

‘ನನಗೆ ಕನ್ನಡದ ಹುಡುಗಿಯೇ ನಾಯಕಿಯಾಗಿ ಬೇಕಿತ್ತು. ನನ್ನ ಎಲ್ಲಾ ಸಿನಿಮಾಗಳಲ್ಲೂ ಅದು ಮೊದಲ ಆದ್ಯತೆಯಾಗಿರುತ್ತದೆ. ವಿಕ್ರಮ್ ಸಿನಿಮಾದಲ್ಲಿ ಸ್ವತಿಷ್ಠ ಪಾತ್ರ ನೋಡಿ ಇಷ್ಟವಾಗಿತ್ತು. ಸ್ವತಿಷ್ಠ ಮೂಲತಃ ಉತ್ತರ ಕರ್ನಾಟಕದವರು. ನಮ್ಮ ಸಿನಿಮಾ ಪಾತ್ರಕ್ಕೆ ಅವರು ಸೂಕ್ತ ಎನಿಸಿತು. ಅವರು ಕೂಡ ಕಥೆ ಕೇಳಿ ಓಕೆ ಮಾಡಿ ನಮ್ಮ ಚಿತ್ರತಂಡ ಸೇರಿಕೊಂಡಿದ್ದಾರೆ’ ಎಂದು ಸಿಂಪಲ್ ಸುನಿ ತಿಳಿಸಿದ್ದಾರೆ.

ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಸಿಂಪಲ್ ಸುನಿ ಅವರದ್ದು. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಸಿನಿಮಾ ತಾರಾಬಳಗ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಸಭಾ ಛಾಯಾಗ್ರಾಹಣ ಇದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!