ಎಸ್​​ಪಿ ಬಾಲಸುಬ್ರಹ್ಮಣ್ಯಂ ಪ್ರತಿಮೆಗೆ ವಿರೋಧ

ಅಜಾತ ಶತ್ರು ಎನಿಸಿಕೊಂಡಿದ್ದಗಾಯಕ ಎಸ್​​ಪಿ ಬಾಲಸುಬ್ರಹ್ಮಣ್ಯಂ ಪ್ರತಿಮೆ ಸ್ಥಾಪನೆಗೆ ಕೆಲವರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

ತೆಲಂಗಾಣ ಸರ್ಕಾರ ಹೈದರಾಬಾದ್​​ನ  ಸಾಂಸ್ಕೃತಿಕ ಕೇಂದ್ರವಾಗಿರುವ ರವೀಂದ್ರ ಭಾರತಿ ಎದುರು ಎಸ್​​ಪಿ ಬಾಲಸುಬ್ರಹ್ಮಣ್ಯಂ ಅವರ ಪ್ರತಿಮೆ ಸ್ಥಾಪಿಸಲು ಮುಂದಾಗಿದೆ. ಆದರೆ ಇದನ್ನು ಕೆಲವರು ವಿರೋಧಿಸಿ ಪ್ರತಿಮೆಯ ಎದುರು ಪ್ರತಿಭಟನೆ ಮಾಡಿದ್ದಾರೆ.

ಬಾಲಸುಬ್ರಹ್ಮಣ್ಯಂ ಅವರ ಹತ್ತಿರದ ಸಂಬಂಧಿ, ಖ್ಯಾತ ನಟ ಶುಭಲೇಖ ಸುಧಾಕರ್ ಮೇಲೆ  ಪ್ರತಿಭಟನಾಕಾರರು ಏರು ಧ್ವನಿಯಲ್ಲಿ ಜಗಳ ಮಾಡಿದ್ದಾರೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಲಸುಬ್ರಹ್ಮಣ್ಯಂ ಅವರು ಆಂಧ್ರ ಪ್ರದೇಶ ರಾಜ್ಯಕ್ಕೆ ಸೇರಿದ ಕಲಾವಿದ ಅವರ ಪ್ರತಿಮೆಯನ್ನು ಹೈದರಾಬಾದ್​​ನ ಪ್ರಮುಖ ಕಲಾ ಕೇಂದ್ರದ ಮುಂದೆ ಸ್ಥಾಪಿಸುವುದು ಅನವಶ್ಯಕ. ತೆಲಂಗಾಣದ ಕಲಾವಿದರಾದ ಗದರ್, ಅಂದೆ ಶ್ರೀ ಅವರುಗಳ ಪ್ರತಿಮೆಗಳನ್ನು ಸ್ಥಾಪಿಸಿ ಎಂದು ಸಾಮಾಜಿಕ ಕಾರ್ಯಕರ್ತ  ಪೃಥ್ವಿರಾಜ್ ಯಾದವ್  ಒತ್ತಾಯಿಸಿದ್ದಾರೆ.

ಪ್ರತಿಭಟನೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಹುತೇಕರು ಸಾಮಾಜಿಕ ಕಾರ್ಯಕರ್ತ ಪೃಥ್ವಿರಾಜ್ ಅವರ ವರ್ತನೆಯನ್ನು ವಿರೋಧಿಸಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರು ತೆಲುಗು ರಾಜ್ಯಗಳ ಹೆಮ್ಮೆಯ ಪುತ್ರ. ಅವರು ಭಾಷೆಗೆ, ತೆಲುಗು ಕಲಾ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!