‘ಒನ್ ಬ್ಯಾಟಲ್ ಆಫ್ಟರ್ ಅನದರ್’ ಅತ್ಯುತ್ತಮ ಚಿತ್ರ

‘ಒನ್ ಬ್ಯಾಟಲ್ ಆಫ್ಟರ್ ಅನದರ್’ ಸಿನಿಮಾ 98ನೇ ಆಸ್ಕರ್ ಅತ್ಯುತ್ತಮ ಸಿನಿಮಾ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ಅಮೆರಿಕದ ಲಾಸ್ ಏಂಜಲೀಸ್ ನಗರದಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್‌ನಲ್ಲಿ 98ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಹಾಲಿವುಡ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

‘ಒನ್ ಬ್ಯಾಟಲ್ ಆಫ್ಟರ್ ಅನದರ್’ ಚಿತ್ರದಲ್ಲಿ ಟೈಟಾನಿಕ್ ಖ್ಯಾತಿಯ ನಟ ಲಿಯೊನಾರ್ಡೋ ಡಿಕ್ಯಾಪ್ರಿಯೋ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.  ಸಿನಿಮಾಕ್ಕೆ ನಿರ್ದೇಶನ ಮಾಡಿರುವ ಪೌಲ್ ಥಾಮಸ್ ಆಂಡರ್ಸನ್ ಅವರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಕೂಡ ಲಭಿಸಿದೆ. ಈ ಚಿತ್ರ ಒಟ್ಟು ಆರು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದಿದೆ.  ಸಿನಿಮಾ ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಆಸ್ಕರ್ ಪ್ರಶಸ್ತಿ ಪಟ್ಟಿ:
ಅತ್ಯುತ್ತಮ ಸಿನಿಮಾ – ಒನ್ ಬ್ಯಾಟಲ್ ಆಫ್ಟರ್ ಅನದರ್
ಅತ್ಯುತ್ತಮ ನಟಿ – ಜೆಸ್ಸಿ ಬಕ್ಲಿ (ಹ್ಯಾಮ್ನೆಟ್)
ಅತ್ಯುತ್ತಮ ನಟ – ಮೈಕಲ್ ಬಿ. ಜೋರ್ಡನ್ (ಸಿನ್ನರ್ಸ್)
ಅತ್ಯುತ್ತಮ ಒರಿಜಿನಲ್ ಸಾಂಗ್ – ಗೋಲ್ಡನ್
ಅತ್ಯುತ್ತಮ ಛಾಯಾಗ್ರಹಣ – ಸಿನ್ನರ್ಸ್
ಅತ್ಯುತ್ತಮ ಸಿನಿಮಾ ಎಡಿಟಿಂಗ್ – ಒನ್ ಬ್ಯಾಟಲ್ ಆಫ್ಟರ್ ಅನದರ್
ಅತ್ಯುತ್ತಮ ಸೌಂಡ್ – ಎಫ್1
ಅತ್ಯುತ್ತಮ ಸಂಗೀತ ಸಂಯೋಜನೆ – ಸಿನ್ನರ್ಸ್
ಅತ್ಯುತ್ತಮ ಡಾಕ್ಯುಮೆಂಟರಿ ಶಾರ್ಟ್ ಫಿಲ್ಮ್ – ಆಲ್ ದಿ ಎಂಪ್ಟಿ ರೂಂ
ಅತ್ಯುತ್ತಮ ವಿಶ್ಯುವಲ್ ಎಫೆಕ್ಟ್ಸ್ – ಅವತಾರ್: ಫೈಯರ್ ಆ್ಯಂಡ್ ಆ್ಯಶ್

ಭಾನುವಾರ ಸಂಜೆ ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು, ಭಾರತದ ಕಾಲಮಾನದ ಪ್ರಕಾರ ಸೋಮವಾರ ಬೆಳಗ್ಗೆ 5.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಪ್ರಸಾರ ಆಯಿತು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!