Oscar: ಭಾರತದ ಕಿರು ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ “ದಿ ಎಲಿಫೆಂಟ್ ವಿಸ್ಪರರ್ಸ್” ಕಿರು ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರತಿಷ್ಟಿತ ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಕಿರು ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪಡೆದ ಭಾರತದ ಮೊದಲ ಸಾಕ್ಷ್ಯಚಿತ್ರ ಎಂಬ ಖ್ಯಾತಿಗೂ ಇದು ಪಾತ್ರವಾಗಿದೆ.

ಈ ಸಾಕ್ಷ್ಯಚಿತ್ರದ ಕಥಾವಸ್ತು ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದು ಅನಾಥ ಆನೆಯನ್ನು ದತ್ತು ತೆಗೆದುಕೊಳ್ಳುವ ಕುಟುಂಬದ ಕಥೆ ಹೊಂದಿದೆ. ಆನೆ ಮರಿಯ ಆರೈಕೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ದಂಪತಿಯ ಕಥೆ ಇದರಲ್ಲಿದೆ. ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಮನಸ್ಸಿಗೆ ನಾಟುವಂತೆ ಚಿತ್ರಿಸಲಾಗಿದೆ. ಕಿರು ಚಿತ್ರ 41 ನಿಮಿಷಗಳ ಅವಧಿ ಹೊಂದಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿಯನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನ ಮಾಡಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಿಸಿದ್ದಾರೆ.

ಮೂಲತಃ ತಮಿಳುನಾಡಿನವರಾದ ಕಾರ್ತಿಕಿ, ಡಾಕ್ಯುಮೆಂಟರಿ ಮೇಕರ್ ಆಗಿ ಕೆಲಸ ಮಾಡಿದ್ದಾರೆ. ಇವರು ಉತ್ತಮ ಫೋಟೋಗ್ರಾಫರ್ ಕೂಡ ಹೌದು. ಇವರು ಈ ಹಿಂದೆ ಅನಿಮಲ್ ಪ್ಲಾನೆಟ್ ಮತ್ತು ಡಿಸ್ಕವರಿ ಚಾನೆಲ್‌ಗಳಲ್ಲಿ ಕೂಡ ಕೆಲಸ ಮಾಡಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!