ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾಕ್ಕೆ ʼಕೊತ್ತಲವಾಡಿʼ ಶೀರ್ಷಿಕೆ ಇಡಲಾಗಿದೆ.
ಪುಷ್ಪ ಅರುಣ್ ಕುಮಾರ್ ಹೊಸ ಸಿನಿಮಾ ನಿರ್ಮಾಣ ಸಂಸ್ಥೆಗೆ PA Productions ಎಂದು ಹೆಸರಿಟ್ಟಿದ್ದಾರೆ. P ಅಂದ್ರೆ ಪುಷ್ಪ. A ಅಂದ್ರೆ ಅರುಣ್ ಕುಮಾರ್. ಯಶ್ ಅಪ್ಪ ಮತ್ತು ಅಮ್ಮನ ಹೆಸರು ಇರೋ ಪ್ರೊಡಕ್ಷನ್ ಹೌಸ್ ಅಕ್ಷಯ ತೃತೀಯ ದಿನ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿದೆ.
ಚಿತ್ರಕ್ಕೆ ಶ್ರೀರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಹೆಜ್ಜೆ ಇಡುತ್ತಿದ್ದಾರೆ.
ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ಕೊತ್ತಲವಾಡಿಯಲ್ಲಿ ಮಾಸ್ ಗೆಟಪ್ ತೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಪೃಥ್ವಿ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಕಥೆಯಲ್ಲಿ ಪೃಥ್ವಿ ಅಂಬರ್ ಆಕ್ಷನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಕಾರ್ತಿಕ್ ಎಸ್ ಕ್ಯಾಮೆರಾ ಕ, ರಾಮಿಸೆಟ್ಟಿ ಪವನ್ ಸಂಕಲನ, ವಿಕಾಸ್ ವಸಿಷ್ಠ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಸಿನಿಮಾಗೆ ಇದೆ.
—-

Be the first to comment