ʼಪಬ್ಬಾರ್‌ʼ ನಲ್ಲಿ ಧೀರೇನ್‌ ಹೊಸ ಅವತಾರ

ಗೀತಾ ಪಿಕ್ಚರ್ಸ್‌ ಬ್ಯಾನರ್‌ ನಡಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ  ‘ಪಬ್ಬಾರ್’ ಸಿನಿಮಾದ ಮೊದಲ ಹಂತದ ಚಿತ್ರೀಕರಣವಾಗಿ ಮುಕ್ತಾಯಗೊಂಡಿದೆ.

ಮೇ ತಿಂಗಳಲ್ಲಿ ಸೆಟ್ಟೇರಿದ್ದ ಪಬ್ಬಾರ್‌ ಸಿನಿಮಾ  ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ‘ಶಿವ 143’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಧೀರೆನ್ ಅವರನ್ನು ಶಾಖಾಹಾರಿ ಸೂತ್ರಧಾರಿ ಸಂದೀಪ್‌ ಸುಂಕದ್‌ ಹೊಸ ಅವತಾರದಲ್ಲಿ ತೋರಿಸಲು ಹೊರಟಿದ್ದಾರೆ.

ಇದೊಂದು ಕ್ರೈಂ, ಅಡ್ವೆಂಚರಸ್ ಥ್ರಿಲ್ಲರ್ ಸಿನಿಮಾವಾಗಿದೆ. ಹಿಮಾಚಲ ಪ್ರದೇಶದ ಶಿಮ್ಲಾ ಬಳಿ ಪಬ್ಬಾರ್ ನದಿ ಕಣಿವೆ ಇದೆ. ಚಿತ್ರದ ಕಥೆಗೂ ಈ ಜಾಗಕ್ಕೂ ಲಿಂಕ್ ಇದೆ. ಪಬ್ಬಾರ್ ನದಿ ಕಣಿವೆ ಚಿತ್ರದ ಕಥೆಯ ಕೇಂದ್ರಬಿಂದು. ಹಾಗಾಗಿ ಚಿತ್ರಕ್ಕೆ ‘ಪಬ್ಬಾರ್’ ಎಂಬ ಟೈಟಲ್ ಇಡಲಾಗಿದೆ.

ಸಿನಿಮಾದಲ್ಲಿ ಧೀರೆನ್‌ ಗೆ ನಾಯಕಿಯಾಗಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಪ್ರೇಮ್ ಸಾಥ್ ಕೊಟ್ಟಿದ್ದಾರೆ.  ಚಿತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಡ್ಯಾನಿ ಕುಟ್ಟಪ್ಪ ಸೇರಿ ದೊಡ್ಡ ತಾರಾ ಬಳಗ ಇದೆ.

ಶಾಖಾಹಾರಿ ಸಿನಿಮಾದಲ್ಲಿ ಕೆಲಸ ಮಾಡಿದ್ದ ತಾಂತ್ರಿಕ ಬಳಗ  ಪಬ್ಬಾರ್‌ ನಲ್ಲಿದೆ. ಮಯೂರ್‌ ಅಂಬೆಕಲ್ಲು ಸಂಗೀತ ನಿರ್ದೇಶನ, ವಿಶ್ವಜಿತ್‌ ರಾವ್‌ ಛಾಯಾಗ್ರಹಣ ಸಿನಿಮಾಕ್ಕಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!