ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಪರವಶ’ ಚಿತ್ರದ ಪೋಸ್ಟರ್ ಬಿಡುಗಡೆಗೊಂಡಿದೆ.
ಸುಧೀಂದ್ರ ನಾಡಿಗರ್ ನಿರ್ದೇಶನದ ‘ಪರವಶ’ ಚಿತ್ರಕ್ಕೆ ಅವ್ಯಕ್ತ ಸಿನಿಮಾಸ್ ಲಾಂಛನದಲ್ಲಿ ಹರೀಶ್ ಗೌಡ ಬಂಡವಾಳ ಹೂಡಿದ್ದಾರೆ. ರಘು ಭಟ್, ಸೋನಾಲ್ ಮೊಂತೆರೊ, ಪವಿತ್ರಾ ಲೋಕೇಶ್, ರಾಜೇಶ್ ನಟರಂಗ ಮುಂತಾದವರು ತಾರಾಬಳಗದಲ್ಲಿದ್ದಾರೆ.
‘ಹೊಸ ತಂಡದ ಜೊತೆಗೆ ಕೆಲಸ ಮಾಡಿರುವುದು ಖುಷಿಯಾಗಿದೆ. ನಾನು ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನನ್ನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ’ ಎಂದರು ರವಿಚಂದ್ರನ್.

‘ಚಿತ್ರೀಕರಣ ಮುಕ್ತಾಯದ ಹಂತದಲ್ಲಿದೆ. ಮಂಗಳೂರು, ಉಡುಪಿ, ಮಣಿಪಾಲ ಹಾಗೂ ಕುಂದಾಪುರದಲ್ಲಿ ಚಿತ್ರೀಕರಣವಾಗಿದೆ. ಥ್ರಿಲ್ಲರ್, ಕೌಟುಂಬಿಕ ಹಾಗೂ ಪ್ರೇಮಕಥಾ ಹಂದರವುಳ್ಳ ಚಿತ್ರವಿದು’ ಎಂದು ನಿರ್ದೇಶಕ ಸುಧೀಂದ್ರ ನಾಡಿಗರ್ ಮಾಹಿತಿ ನೀಡಿದರು.
‘ಪರವಶ’ ಚಿತ್ರಕ್ಕೆ ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ, ಆನಂದ್ ಮೀನಾಕ್ಷಿ ಛಾಯಾಗ್ರಹಣವಿದೆ.
—–
Post Views:
122
Be the first to comment