ಬಿಜೆಪಿ ಸೋತ ಬೆನ್ನಿಗೇ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಟೀಕಿಸುವ ಕೆಲಸ ಶುರು ಆಗಿದೆ.
ಡೊಳ್ಳುಕುಣಿತದ ಕುರಿತು ನಿರ್ಮಿಸಿದ್ದ “ಡೊಳ್ಳು”ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಬಂದಾಗ, ಬೊಮ್ಮಾಯಿ ಮಾಮಗೆ ಚಿತ್ರ ವೀಕ್ಷಿಸಲು ಕೋರಿದ್ದೆವು. ಮಾಮ ತೋರಿದ ದುರಹಂಕಾರ ನನ್ನ ಕಣ್ಣಿನಲ್ಲಿ ಇನ್ನೂ ಹಾಗೆ ಇದೆ ಎಂದು ನಿರ್ದೇಶಕ ಪವನ್ ಕುಮಾರ್ ಒಡೆಯರ್ ಹೇಳಿದ್ದಾರೆ.
ತೆಲುಗು ಚಿತ್ರದ ಕಾರ್ಯಕ್ರಮಕ್ಕೆ ಬೊಮ್ಮಾಯಿ ಮಾಮಗೆ 3 ತಾಸು ಕುಳಿತುಕೊಳ್ಳುವಷ್ಟು ಸಮಯ ಇದೆ. ಕನ್ನಡಿಗರು ಮುಟ್ಟಾಳರಲ್ಲ ಎಂದು ಟ್ವೀಟ್ ಮಾಡುವ ಮೂಲಕ ಜೋರಾಗಿ ಗುದ್ದು ನೀಡಿದ್ದಾರೆ.
ಸಿದ್ದರಾಮಯ್ಯ ಸರ್ ಗೆ ಒಂದೇ ಒಂದು ಬಾರಿ ಕರೆ ಮಾಡಿದ್ದೆವು. “ಹೌದಾ, ಡೊಳ್ಳು ಕುಣಿತ ನಂಗೆ ಭಾರಿ ಇಷ್ಟ ರೀ” ಎಂದು ಕರೆಕೊಟ್ಟ ಸಂಜೆಯೇ ಬಂದು ಚಿತ್ರ ವೀಕ್ಷಿಸಿ, ಹಾರೈಸಿ, ಹಲವಾರು ಕಡೆ ಹೆಮ್ಮೆ ಇಂದ ಮಾತನಾಡಿದ್ದರು. ಕನ್ನಡ ಭಾಷೆ, ಕರ್ನಾಟಕ ಸಂಸ್ಕೃತಿ, ಜಾನಪದ ಕಲೆ. ಇವೆಲ್ಲವನ್ನೂ ಜನ ಮಾರಿಕೊಳ್ಳಲ್ಲ ಎಂದು ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಅವರ ಜೊತೆ ಬಸವರಾಜ್ ಬೊಮ್ಮಾಯಿ ಅವರನ್ನು ಹೋಲಿಕೆ ಮಾಡುವ ಯತ್ನ ಮಾಡಿದ್ದಾರೆ.
—-
Be the first to comment