ಪವಿತ್ರಾ ಗೌಡ ಮಾಜಿ ಪತಿ ನಿಧನ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ಆರೋಪಿಯಾಗಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ (42) ನಿಧನರಾಗಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.

ಸುಮಾರು 7–8 ತಿಂಗಳ ಹಿಂದೆಯೇ ರಾಜಸ್ಥಾನದಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು,  ಈ ವಿಚಾರ ತಡವಾಗಿ ಬಹಿರಂಗವಾಗಿದೆ. ಬೆಂಗಳೂರಿನಿಂದ ರಾಜಸ್ಥಾನಕ್ಕೆ ತೆರಳಿದ ಬಳಿಕ ಸಂಜಯ್ ಸಿಂಗ್ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪವಿತ್ರಾ ಗೌಡ ಅವರಿಂದ ವಿಚ್ಛೇದನ ಪಡೆದ ಬಳಿಕ ಸಂಜಯ್ ಸಿಂಗ್ ರಾಜಸ್ಥಾನದಲ್ಲೇ ನೆಲೆಸಿದ್ದರು.  ದಾಂಪತ್ಯದಲ್ಲಿ ಮನಸ್ತಾಪ ಉಂಟಾಗಿ ಅವರು ಮಾನಸಿಕವಾಗಿ ಕುಗ್ಗಿ ಮದ್ಯಪಾನಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಇದೇ ಕಾರಣದಿಂದ ಅವರ ಆರೋಗ್ಯ ಹದಗೆಟ್ಟಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಸಂಜಯ್ ಸಿಂಗ್ ವೃತ್ತಿಯಲ್ಲಿ ಶಿಕ್ಷಕರಾಗಿದ್ದು, ಸ್ವಂತ ಕಂಪ್ಯೂಟರ್ ಇನ್‌ಸ್ಟಿಟ್ಯೂಟ್ ಕೂಡ ನಡೆಸುತ್ತಿದ್ದರು.  ಪವಿತ್ರಾ ಗೌಡ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು.  ದಂಪತಿಗೆ ಖುಷಿ ಎಂಬ ಹೆಣ್ಣು ಮಗು ಜನಿಸಿತ್ತು. ಬಳಿಕ ದಾಂಪತ್ಯದಲ್ಲಿ ಮನಸ್ತಾಪ ಉಂಟಾಗಿ ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆದಿದ್ದರು. ವಿಚ್ಛೇದನದ ಬಳಿಕ ಬೆಂಗಳೂರಿನಿಂದ ದೂರವಾಗಿದ್ದ ಸಂಜಯ್ ಸಿಂಗ್ ರಾಜಸ್ಥಾನದಲ್ಲಿ ಕೆಲಸ ಮಾಡಿಕೊಂಡಿದ್ದರು.

ಪವಿತ್ರಾ ಗೌಡ ಬಂಧನಕ್ಕೊಳಗಾದ ಸಂದರ್ಭದಲ್ಲಿ ರಾಜಸ್ಥಾನದಿಂದ ಬೆಂಗಳೂರಿಗೆ ಆಗಮಿಸಿದ್ದ ಸಂಜಯ್ ಸಿಂಗ್ ಮಾಜಿ ಪತ್ನಿಯ ಪರವಾಗಿ ಮಾಧ್ಯಮಗಳ ಮುಂದೆ ಮಾತನಾಡಿದ್ದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!