ಬಿಗ್ ಬಾಸ್ ಖ್ಯಾತಿಯ ತನಿಶಾ ಕುಪ್ಪಂಡ ಮತ್ತು ಕಿಶನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ ‘ಪೆನ್ ಡ್ರೈವ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.
ಸೆಬಾಸ್ಟಿಯನ್ ಡೇವಿಡ್ ನಿರ್ದೇಶನದ ಚಿತ್ರ ‘ಪೆನ್ ಡ್ರೈವ್’ ಈಗಾಗಲೇ ತನ್ನ ಶೀರ್ಷಿಕೆಯಿಂದ ಕುತೂಹಲವನ್ನು ಹುಟ್ಟುಹಾಕಿದೆ. ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರಕ್ಕೆ ಸೆಬಾಸ್ಟಿಯನ್ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ನಾಗೇಶ್ ಅವರು ಚಿತ್ರಕಥೆಗೆ ಕೊಡುಗೆ ನೀಡಿದ್ದಾರೆ.
ಚಿತ್ರದಲ್ಲಿ ನಟಿ ಮಾಲಾಶ್ರೀ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ತನಿಷಾ ಕುಪ್ಪಂಡ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನಾ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮತ್ತು ಎನ್ ಹನುಮಂತರಾಜು ಮುಂತಾದವರು ನಟಿಸಿದ್ದಾರೆ.
‘ಪೆನ್ ಡ್ರೈವ್’ ಚಿತ್ರಕ್ಕೆ ಡಾ. ವಿ ನಾಗೇಂದ್ರ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರ ಬಿಡುಗಡೆಗೂ ಮುನ್ನ ಹಾಡುಗಳನ್ನು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.
ಚಿತ್ರಕ್ಕೆ ಪಿವಿಆರ್ ಸ್ವಾಮಿ ಅವರ ಛಾಯಾಗ್ರಹಣ ಮತ್ತು ನಾಗೇಶ್ ಅವರ ಸಂಕಲನವಿದೆ. ಲಯನ್ ಆರ್ ವೆಂಕಟೇಶ್ ಮತ್ತು ಲಯನ್ ಎಸ್ ವೆಂಕಟೇಶ್ ಚಿತ್ರದ ನಿರ್ಮಾಪಕರಾಗಿದ್ದಾರೆ.

Be the first to comment